Advertisement
ಕೋಟೆಯೊಳಗಿನ ಮೇಲುದುರ್ಗದ ಶ್ರೀ ಏಕನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ರಾಜ ವಂಶಸ್ಥರ ಸಂಪ್ರದಾಯದಂತೆ ದಶಕಗಳ ನಂತರ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರಿಗೆ ಉಯ್ಯಾಲೆ ಉತ್ಸವ ವೈಭವೋಪೇತವಾಗಿ ಜರುಗಿತು.
Related Articles
Advertisement
ಬುರುಜನಹಟ್ಟಿ, ಜೋಗಿಮಟ್ಟಿ ರಸ್ತೆ, ಕಾಮನಬಾವಿ ಬಡಾವಣೆ ಸೇರಿದಂತೆ ನಗರದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಮೇಲುದುರ್ಗಕ್ಕೆ ಭೇಟಿ ನೀಡಿ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ದೇವಿಯ ಉಯ್ಯಾಲೆ ಉತ್ಸವವನ್ನು ಕಣ್ತುಂಬಿಕೊಂಡರು. ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಮಂಗಳವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರದುರ್ಗದ ಆಡುಮಲ್ಲೇಶ್ವರದ ಹಿಮವತ್ ಕೇದಾರದಲ್ಲಿ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇವಿಯ ಹಾಗೂ ಶ್ರೀ ಏಕನಾಥೇಶ್ವರಿ ಅಮ್ಮನವರ ಹೊಸ ಮುಖ ಪದ್ಮದ ಮೆರವಣಿಗೆಯೊಂದಿಗೆ ಗಂಗಾಪೂಜೆ ನೆರವೇರಿಸಲಾಯಿತು. ಡಿ. 8ರಂದು ಬೆಳಗ್ಗೆ 9ರಿಂದ ಶ್ರೀ ಏಕನಾಥೇಶ್ವರಿ ಪಾದಗುಡಿಯಿಂದ ಐತಿಹಾಸಿಕ ಚಿತ್ರದುರ್ಗ ನಗರದ ರಾಜಬೀದಿ ಹಾಗೂ ಪ್ರಮುಖ ಬೀದಿಗಳಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರ ಜತೆಯಲ್ಲಿ ನವದುರ್ಗೆಯರು ಸೇರಿದಂತೆ ನಗರದ ಮತ್ತಿತರ ಪ್ರಮುಖ ದೇವತೆಯರ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.