“ಕಿಸ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟಿ ಶ್ರೀಲೀಲಾ, ಈಗ ಕನ್ನಡ ಚಿತ್ರರಂಗಕ್ಕಿಂತ ಪರಭಾಷೆಗಳ ಸಿನಿಮಾಗಳಲ್ಲೇ ಹೆಚ್ಚು ಬಿಝಿಯಾಗಿರುವ ನಟಿ. ಅದರಲ್ಲೂ ತೆಲುಗು ಚಿತ್ರರಂಗದಲ್ಲಿ ಮೋಡಿ ಮಾಡುತ್ತಿರುವ ಶ್ರೀಲೀಲಾ, ಕನ್ನಡ ಮೂಲದ ನಟಿಯರಾದ ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಅವರಿಗೂ ಸೆಡ್ಡು ಹೊಡೆದು ನಿಧಾನವಾಗಿ ಭದ್ರ ನೆಲೆ ಕಂಡುಕೊಳ್ಳುತ್ತಿದ್ದಾರೆ.
ಇತ್ತೀಚೆಗಷ್ಟೇ ತೆಲುಗಿನಲ್ಲಿ ನಟ ಅಲ್ಲು ಅರ್ಜುನ್ ಅಭಿನಯದ ಹೊಸ ಸಿನಿಮಾಕ್ಕೆ ಶ್ರೀಲೀಲಾ ನಾಯಕಿಯಾಗುವ ಅವಕಾಶ ಗಿಟ್ಟಿಸಿಕೊಂಡಿದ್ದರು. ಅದರ ಬೆನ್ನಲ್ಲೇ ತೆಲುಗಿನ ಮತ್ತೂಬ್ಬ ಸ್ಟಾರ್ ನಟ “ಬಾಹುಬಲಿ” ಖ್ಯಾತಿಯ ಪ್ರಭಾಸ್ ಅವರಿಗೂ ಶ್ರೀಲೀಲಾ ಹೀರೋಯಿನ್ ಆಗಲಿದ್ದಾರಂತೆ!
ಹೌದು, “ಆದಿಪುರುಷ್’ ಸಿನಿಮಾದ ಬಳಿಕ ನಟ ಪ್ರಭಾಸ್ “ಕಲ್ಕಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಇದರ ಬೆನ್ನಲ್ಲೇ ಪ್ರಭಾಸ್ – ಹನು ರಾಘವಪುಡಿ ಕಾಂಬಿನೇಷನ್‌ನಲ್ಲಿ ಹೊಸ ಪ್ರಾಜೆಕ್ಟ್ ಮಾಡಲು ಪ್ಲಾನ್ ನಡೆಯುತ್ತಿದೆ.
ಸದ್ಯ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಈ ಸಿನಿಮಾದ ಬಗ್ಗೆ ಅಧಿಕೃತವಾಗಿ ಘೋಷಣೆ ಹೊರಬೀಳಲಿದೆ. ಇನ್ನು ಹೆಸರಿಡದ ಈ ಸಿನಿಮಾಕ್ಕೆ ಶ್ರೀಲೀಲಾ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
ಶ್ರೀಲೀಲಾ ಕೈಯಲ್ಲಿ ಈಗಾ ಗಲೇ 9ಕ್ಕೂ ಹೆಚ್ಚು ಸಿನಿಮಾಗಳಿವೆ. ಅದ ರಲ್ಲೂ ಬಹುತೇಕ ಸ್ಟಾರ್ ಸಿನಿಮಾಗಳಲ್ಲಿ ಬ್ಯಾಕ್ ಟು ಬ್ಯಾಕ್ ಅವಕಾಶಗಳನ್ನು ಗಿಟ್ಟಿಸಿ ಕೊಳ್ಳುತ್ತಿರುವ ಶ್ರೀಲೀಲಾ ಈ ಹೊಸ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲಿಯೇ ಹೊರಬರುವ ಸಾಧ್ಯತೆಯಿದೆ.