Advertisement

ಥಾಣೆ ಮಾಜಿವಾಡಾದ ಶ್ರೀ ಆದಿಶಕ್ತಿ ಕನ್ನಡ ಶಾಲೆ ವಾರ್ಷಿಕ ಕ್ರೀಡೋತ್ಸವ

12:29 PM Dec 07, 2018 | Team Udayavani |

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಕತ್ವದ ಪ್ರತಿಷ್ಠಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಡಿ. 2ರಂದು ಮಾಜಿವಾಡಾದ ಗ್ರಾಮೀಣ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

Advertisement

ಎಸ್‌ಎಂಎಸ್‌ ಇನ್‌ಸ್ಟಿಟ್ಯೂಟ್‌ ಖೋಪಟ್‌ ಥಾಣೆ ಇದರ ಸಿಇಒ ಅಂಜಲಿ ಶೇಖರ್‌ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಉತ್ಸಾಹದಿಂದ ಭಾಗವಹಿಸುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಜೀವನ ದಲ್ಲಿ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಶಿಸ್ತನ್ನು ಅಳವಡಿಸಿಕೊಂಡಾಗ ಸಾಧನೆಯನ್ನು ಮಾಡಲು ಸಾಧ್ಯವಿದೆ. ಮಕ್ಕಳು ಗುರಿಯನ್ನು ಮುಟ್ಟುವ ಕನಸು ಕಾಣುವುದರೊಂದಿಗೆ ಅದನ್ನು ನನಸಾಗಿಸುವತ್ತ ದಾಪುಗಾಲಿಡಬೇಕು ಎಂದರು.  

ಕ್ರೀಡೆಯಲ್ಲಿ ಗೆಲ್ಲುವುದು ಮುಖ್ಯವಲ್ಲ ಅಥವಾ ಸೋಲುವುದು ಮುಖ್ಯವಾಗುವುದಿಲ್ಲ. ಕ್ರೀಡಾ ಮನೋ ಭಾವನೆಯೊಂದಿಗೆ ಪಾಲ್ಗೊಳ್ಳುವುದು ಬಹಳ ಮುಖ್ಯ. ಇದು ಮಕ್ಕಳನ್ನು ಯಶಸ್ವಿ ವ್ಯಕ್ತಿಗಳನ್ನಾಗಿ ರೂಪಿಸುತ್ತದೆ ಎಂದು ನುಡಿದು ಶುಭಹಾರೈಸಿದರು.

ಕ್ರೀಡೋತ್ಸವದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಹಾಗೂ ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆಯಿಂದ ಶಾರೀರಿಕ ಶಕ್ತಿ ವೃದ್ಧಿಯಾಗಿ ಉತ್ತಮ ಆರೋಗ್ಯ ಲಭಿಸುತ್ತದೆ. ಭೇದಭಾವ ಮರೆತು ಎಲ್ಲಾ ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಕ್ರೀಡೆಗೂ ಪಾಠದಷ್ಟೇ ಮಹತ್ವವನ್ನು ನೀಡಬೇಕು. ಆಗ ಮಾತ್ರ ಮಕ್ಕಳು ಪ್ರತಿಭಾವಂತರಾಗಿ ಬೆಳೆಯಲು ಸಾಧ್ಯವಿದೆ ಎಂದರು.

ಬೆಳಗ್ಗೆ 8ಕ್ಕೆ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿ ಗಳು, ಮುಖ್ಯ ಶಿಕ್ಷಕರು ಮೈದಾನದಲ್ಲಿ ತೆಂಗಿನಕಾಯಿ ಒಡೆದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ವಯೋಮಿತಿಗೆ ಅನುಗುಣವಾಗಿ ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ರವೀಂದ್ರ ಬಿ. ಅವರು ಸ್ವಾಗತಿಸಿದರು. ಶಿಕ್ಷಕಿ ಪ್ರಮೋದಾ ಮಾಡಾ ಅವರು ಅತಿಥಿಗಳನ್ನು ಪರಿಚಯಿಸಿದರು.

Advertisement

ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳನ್ನು ಅತಿಥಿ-ಗಣ್ಯರು, ಸಂಘದ ಪದಾಧಿಕಾರಿಗಳು, ಬಹುಮಾನವನ್ನಿತ್ತು ಗೌರವಿಸಿದರು. ಬಹುಮಾನ ವಿಜೇತರ ಯಾದಿಯನ್ನು ಶಿಕ್ಷಕಿ ಶರ್ಮಿಳಾ ಶೆಟ್ಟಿ ಮತ್ತು ಮಮತಾ ಶೆಟ್ಟಿ ಅವರು ಓದಿದರು. ವೆಂಕಟರಮಣ ಶೆಣೈ ಅವರು ಕಾರ್ಯಕ್ರಮ ನಿರ್ವಹಿಸಿದರು. ಪ್ರಕಾಶ್‌ ಚಿಂತಾಮಣಿ ವಂದಿಸಿದರು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಶಿಕ್ಷಕೇತರ ಸಿಬಂದಿಗಳು, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಕ್ಕಳ ಪಾಲಕ-ಪೋಷಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next