ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯ ವತಿಯಿಂದ 62ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಇತ್ತೀಚೆಗೆ ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ಶಾಲೆ ಯ ಸಭಾಗೃಹದಲ್ಲಿ ನಡೆಯಿತು.
ಶಾಲಾ ವಿದ್ಯಾರ್ಥಿಗಳ ನಾಡ ಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು. ಮಾಧ್ಯ ಮಿಕ ಶಾಲಾ ವಿದ್ಯಾರ್ಥಿನಿ ಸಾನ್ವಿ ಪೂಜಾರಿ ಕರ್ನಾಟಕ ರಾಜ್ಯೋತ್ಸವದ ಬಗ್ಗೆ ಮಾತನಾಡಿ, ಕರ್ನಾಟಕ ವೈಭವ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ವಿವರಿಸಿದರು.
ಶ್ರೀ ಆದಿಶಕ್ತಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ ವಿರುವ ಪ್ರಾಚೀನ ಭಾಷೆ ಕನ್ನಡದ ಬಗ್ಗೆ ನಾವೆಲ್ಲರೂ ಅಭಿಮಾನ ಪಡಬೇಕು. ಅತೀ ಹೆಚ್ಚು ಜ್ಞಾನ ಪೀಠ ಪ್ರಶಸ್ತಿಯನ್ನು ಬಾಚಿಕೊಂಡ ಭಾರತೀಯ ಭಾಷೆ ಕನ್ನಡ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂಬ ಕವಿವಾಣಿಯನ್ನು ನೆನಪಿಸುತ್ತಾ ಕನ್ನಡಕ್ಕೆ ಗೌರವ ಸಲ್ಲಿಸಿದರು.
ಶ್ರೀ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಅವರು, ಕರ್ನಾಟಕದ ಹಿರಿಮೆ, ನಾಡು-ನುಡಿಯ ಬಗ್ಗೆ, ಭಾರತೀಯ ಪರಂಪರೆಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ಸಂಘದ ಮಾಜಿ ಕೋಶಾಧಿಕಾರಿ ರಮಾನಾಥ ಐಲ್ ಅವರು ಕರ್ನಾಟಕದ ನಿಸರ್ಗ ಸೌಂದರ್ಯ, ಸಾಹಿತ್ಯ ಹಾಗೂ ಕಲೆಯ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಸಂಘದ ಕಾರ್ಯ ದರ್ಶಿ ವಾದಿರಾಜ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ಮಾಜಿ ಕೋಶಾಧಿಕಾರಿ ಕೇಶವ ಆಳ್ವ ಅವರು ಉಪಸ್ಥಿತ ರಿದ್ದರು. ಸಹಶಿಕ್ಷಕಿ ಪ್ರಮೋದಾ ಮ್ಹಾಡ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ, ಶಿಕ್ಷಕೇತರ ಸಿಬಂದಿ, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.