ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿ ಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು.
ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ ಶಾಂತಿ ನೇತೃತ್ವದಲ್ಲಿ ನಾರಾಯಣಗುರು ವೈದಿಕ ಸಮಿತಿ ಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಗರಡಿ ಕ್ಷೇತ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಯಾಗ ಮಂಟಪದಲ್ಲಿ ಬೆಳಗ್ಗೆ 5.00ರಿಂದ ಸಹಸ್ರ ನಾರಿಕೇಳ ಗಣಯಾಗ ಶಾಂತಿ ಋತ್ವಿಜರ ಉಪಸ್ಥಿತಿಯಲ್ಲಿ ಆರಂಭವಾಯಿತು. ಮಧ್ಯಾಹ್ನ ವೇಳೆ ಗಣಯಾಗದ ಪೂರ್ಣಾಹುತಿ ನಡೆಯಿತು. ನೂರಾರು ಮಂದಿ ಶಾಂತಿ ಋತ್ವಿಜರು, ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ನಾನಾ ಬಗೆಯ ಗೊಂಡೆ, ಹೂವು, ಹಿಂಗಾರ ಸೇರಿದಂತೆ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.
ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಲತಿ ಜೆ. ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ., ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಮ್ಯಾನೇಜರ್ ಜೆ. ಕಿಶೋರ್, ಗರಡಿ ಕ್ಷೇತ್ರದ ಮೊಕ್ತೇಸರರಾದ ಬಿ.ವಿಠಲ, ಎ. ವಾಮನ, ಬಿ. ದಾಮೋದರ ನಿಸರ್ಗ, ದಿವರಾಜ್, ಜಗದೀಪ್ ಡಿ. ಸುವರ್ಣ, ದಿನೇಶ್ ಅಂಚನ್, ಜೆ. ವಿಜಯ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಸಂದೀಪ್ ಗರಡಿ, ಆರ್ಥಿಕ ಸಮಿತಿ ಮುಖ್ಯಸ್ಥ ಶರಣ್ ಪಂಪ್‌ವೆಲ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂ.ಅನುದಾನ