ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಗುರುವಾರ ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿದರು.
ಶಾಸಕರಾದ ಡಾ. ಪರಮೇಶ್ವರ್, ಆರ್. ವಿ. ದೇಶಪಾಂಡೆ, ಹೆಚ್. ಕೆ. ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಎಮ್. ಬಿ. ಪಾಟೀಲ್, ಕೆ. ಹೆಚ್. ಮುನಿಯಪ್ಪ ಸೇರಿದಂತೆ ಹಲವು ಶಾಸಕರು ಅನುಮೋದಿಸಿದರು.
ಇದನ್ನೂ ಓದಿ: Siddaramaiah ಪ್ರಮಾಣ ವಚನ ಸಮಾರಂಭದಲ್ಲಿ ನಿತೀಶ್ ಕುಮಾರ್ ಭಾಗಿ