Advertisement

ಸ್ವಾಮಿನಾಥನ್‌ ನೇತೃತ್ವದಲ್ಲಿ ಕಾವೇರಿ ವಿವಾದಕ್ಕೆ ಇತಿಶ್ರೀ

06:15 AM Jan 19, 2018 | Team Udayavani |

ಬೆಂಗಳೂರು: ಕೃಷಿ ವಿಜ್ಞಾನಿ ಪ್ರೊ. ಸ್ವಾಮಿನಾಥನ್‌ ಅವರ ನೇತೃತ್ವದಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ರೈತರೊಂದಿಗೆ ಮಾತುಕತೆ ನಡೆಸಿ ಕಾವೇರಿ ವಿವಾದ ಬಗೆ ಹರಿಸಲು ಪ್ರಯತ್ನಿಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Advertisement

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನದಿ ನೀರಿನ ಹಂಚಿಕೆ ವಿಚಾರವಾಗಿ ರಾಜಕೀಯ ಬದಿಗಿಟ್ಟು ಎರಡೂ ರಾಜ್ಯಗಳ ರೈತರು ಕುಳಿತು ಮಾತುಕತೆ ನಡೆಸಿದರೆ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಅದಕ್ಕಾಗಿ ಕೃಷಿ ತಜ್ಞ ಸ್ವಾಮಿನಾಥನ್‌ ಅವರ ನೇತೃತ್ವದಲ್ಲಿಯೇ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಆರಂಭಿಸಲಾಗುವುದು ಎಂದು ಹೇಳಿದರು. ಅದೇ ರೀತಿ ಮಹದಾಯಿ ವಿವಾದವನ್ನೂ ಮಾತುಕತೆಯ ಮೂಲಕವೇ ಬಗೆ ಹರಿಸಿಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ಈ ವಿಷಯದಲ್ಲಿ ಮೌನವಾಗಿರುವುದು ಬೇಸರ ತಂದಿದೆ.

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ರೈತ ಪರ ಹೋರಾಟ ಆರಂಭಿಸಿದ್ದು, ಅವರ ನೇತೃತ್ವದಲ್ಲಿ ಮಹದಾಯಿ ಹೋರಾಟವನ್ನು ಮುಂದುವರೆಸಿ, ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಲಾಗುವುದು ಎಂದು ಹೇಳಿದರು. ಹಿಂದೆ ಇಂದಿರಾ ಗಾಂಧಿ, ವಾಜಪೇಯಿ ಪ್ರಧಾನಿಯಾಗಿದ್ದಾಗ ನದಿ ನೀರಿನ ಹಂಚಿಕೆ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ವಿವಾದವನ್ನು ಬಗೆ ಹರಿಸಬೇಕೆಂದು ಸ್ವಾಮೀಜಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next