Advertisement

ಶ್ರೀಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ಪ್ರಕರಣ: ವಿಚಾರಣೆ ಅಂತ್ಯ

12:41 AM May 04, 2023 | Team Udayavani |

ಪ್ರಯಾಗ್‌ರಾಜ್‌: ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ಗೆ ವರ್ಗಾಯಿಸುವ ಬಗೆಗಿನ ವಿಚಾರಣೆ ಪೂರ್ತಿಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

Advertisement

ಈ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ನ ನ್ಯಾ|ಅರವಿಂದ ಕುಮಾರ್‌ ಮಿಶ್ರಾ ಬುಧವಾರ ವಿಚಾರಣೆ ನಡೆಸಿದರು. ಮಥುರಾ ಜಿಲ್ಲಾ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ನ್ಯಾ| ಮಿಶ್ರಾ ಅವರು ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಲಿಖೀತವಾಗಿ ಮೂರು ದಿನಗಳ ಒಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next