Advertisement
ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ ಕುಣಿತ ಭಜನೆ ಸೇವೆ ನೆರವೇರಲಿದೆ.
ಭಕ್ತರು ಸ್ವಯಂಪ್ರೇರಿತ ರಾಗಿ ನೆರವೇರಿಸುವ ಬೀದಿ ಉರುಳುಸೇವೆ ನೆರವೇರಿ ಸಲು ಬೇಕಾದ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ನ.30ರಂದು ಸಂಘ ಸಂಸ್ಥೆಗಳ ಸಹಕಾರದಿಂದ ಕುಮಾರ ಧಾರದಿಂದ ರಾಜಗೋಪುರದ ತನಕ ರಸ್ತೆಯನ್ನು ಗುಡಿಸಿ ಬೃಹತ್ ಸ್ವಚ್ಛತಾ ಸೇವೆ ನಡೆಸಲಾಗುವುದು. ಸಂಜೆ ನೀರು ಹಾಯಸಿ ರಸ್ತೆಯನ್ನು ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ನೀರುಹಾಯಿಸಿ ರಸ್ತೆಯ ದೂಳನ್ನು ತೆರವು ಗೊಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಆಡಳಿತಾಧಿಕಾರಿ ಹೇಳಿದರು.
Related Articles
Advertisement