Advertisement
ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆಯವರೇ ಅಪಾಯದ ಕತ್ತಿ ನಿಮ್ಮ ತಲೆ ಮೇಲಿದೆ: ಬಿಜೆಪಿ ಟ್ವೀಟ್
Related Articles
Advertisement
ಇಂಧನ ಆಮದು ಮಾಡಿಕೊಳ್ಳಲು ಭಾರತದ ಸರ್ಕಾರದ 500 ಮಿಲಿಯನ್ ಡಾಲರ್ ಸಾಲದ ನಿರೀಕ್ಷೆಯಲ್ಲಿರುವುದಾಗಿ ಶ್ರೀಲಂಕಾ ಸರ್ಕಾರ ಹೇಳಿದೆ. ಶ್ರೀಲಂಕಾದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಇದು ದ್ವೀಪರಾಷ್ಟ್ರದ ಇತಿಹಾಸದ ಕರಾಳ ದಿನಗಳಾಗಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ರನಿಲ್ ವಿಕ್ರಮಸಿಂಘೆ ಪ್ರಕಾರ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ಭಾರತ, ಚೀನಾ ಸೇರಿದಂತೆ ಅಂದಾಜು 6 ಬಿಲಿಯನ್ ಡಾಲರ್ ಶತಕೋಟಿ ಮೊತ್ತದ ನೆರವಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು, ರಾಜಕೀಯ ಅಸ್ಥಿರತೆಯಿಂದ ಕಂಗೆಟ್ಟಿರುವ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಪರದಾಡುವಂತಾಗಿದೆ ಎಂದು ಬ್ಲೂಮ್ ಬರ್ಗ್ ಎಕಾನಾಮಿಕ್ಸ್ ತಿಳಿಸಿದೆ.