Advertisement

ರಾಷ್ಟ್ರೀಯ ಭದ್ರತೆಗೆ ಧಕ್ಕೆ: ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಿದ ಶ್ರೀಲಂಕಾ

11:50 AM Apr 28, 2021 | Team Udayavani |

ಕೊಲಂಬೊ: ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ, ಹಿಜಬ್ ನಿಷೇಧಿಸುವ ವಿವಾದಿತ ಪ್ರಸ್ತಾಪಕ್ಕೆ ಶ್ರೀಲಂಕಾ ಕ್ಯಾಬಿನೆಟ್ ಮಂಗಳವಾರ(ಏಪ್ರಿಲ್ 28) ಅನುಮೋದನೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಬಳ್ಳಾರಿ: ಲಾಕ್ ಡೌನ್ ಭಯದಲ್ಲಿ ಊರಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವು

ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಮುಸ್ಲಿಂ ಮಹಿಳೆಯರು ಬುರ್ಖಾ, ಹಿಜಬ್ ಧರಿಸಿ ಓಡಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿಯೇ ಬುರ್ಖಾ ನಿಷೇಧದ ಪ್ರಸ್ತಾಪಕ್ಕೆ ಸಹಿ ಹಾಕಿ ಕ್ಯಾಬಿನೆಟ್ ಅನುಮತಿಗಾಗಿ ಕಳುಹಿಸಿಕೊಟ್ಟಿರುವುದಾಗಿ ಶ್ರೀಲಂಕಾದ ಸಾರ್ವಜನಿಕ ಭದ್ರತಾ ಸಚಿವ ಶರತ್ ವೀರಶೇಖರಾ ಹೇಳಿಕೆ ನೀಡಿದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿರುವುದಾಗಿ ವರದಿ ವಿವರಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಮುಖ ಮುಚ್ಚಿಕೊಳ್ಳುವ ವಸ್ತ್ರವನ್ನು ನಿಷೇಧಿಸಲು ಶ್ರೀಲಂಕಾ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕ್ಯಾಬಿನೆಟ್ ವಕ್ತಾರ, ಮಾಹಿತಿ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದು, ಈ ಸಂದರ್ಭದಲ್ಲಿ ನಿಖರವಾಗಿ ಬುರ್ಖಾದ ಹೆಸರನ್ನು ಉಲ್ಲೇಖಿಸಿಲ್ಲ ಎಂದು ವರದಿ ತಿಳಿಸಿದೆ.

ಈಸ್ಟರ್ ಸಂಡೇಯ ವೇಳೆ ಹೋಟೆಲ್ ಮತ್ತು ಚರ್ಚ್ ಗಳ ಮೇಲೆ ಭಯೋತ್ಪಾದಕ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡು ವರ್ಷಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿರುವ ಕೆಹೆಲಿಯಾ, ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಕ್ಯಾಬಿನೆಟ್ ಈ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next