ಕೆಬೆರಾ: ಆರಂಭಿಕ ಆಟಗಾರ್ತಿ ಯರಾದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಅವರ ಭರ್ಜರಿ ಆಟದ ನೆರವಿನಿಂದ ಆಸ್ಟ್ರೇಲಿಯ ತಂಡವು ಐಸಿಸಿ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದ ಗುರುವಾರದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 10 ವಿಕೆಟ್ ಅಂತರದ ಗೆಲುವು ದಾಖಲಿಸಿ ಬಹುತೇಕ ಸೆಮಿಫೈನಲ್ ಹಂತಕ್ಕೇರಿದೆ.
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು 8 ವಿಕೆಟಿಗೆ 112 ರನ್ ಪೇರಿಸಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯ ತಂಡವು 15.5 ಓವರ್‌ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೇ 113 ರನ್ ಗಳಿಸಿ ಜಯಭೇರಿ ಬಾರಿಸಿತು. ಆರಂಭಿಕ ಆಟಗಾರ್ತಿಯರಾದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಅವರು ಅಮೋಘವಾಗಿ ಆಡಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಇಬ್ಬರೂ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಹೀಲಿ 54 ಮತ್ತು ಮೂನಿ 56 ರನ್ ಗಳಿಸಿ ಅಜೇಯರಾಗಿ ಉಳಿದರು.
ಈ ಗೆಲುವಿನಿಂದ ಆಸ್ಟ್ರೇಲಿಯ ಸತತ ಮೂರು ಜಯದೊಂದಿಗೆ ಬಣ ಒಂದರಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿತು. ಶ್ರೀಲಂಕಾ ಎರಡು ಗೆಲುವಿನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಆಸ್ಟ್ರೇಲಿಯ ಅಂತಿಮ ಪಂದ್ಯದಲ್ಲಿ ಶನಿವಾರ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
ಪಾಕಿಗೆ ಗೆಲುವು:
ಆರಂಭಿಕ ಆಟಗಾರ್ತಿ ಮುನೀಬಾ ಅಲಿ ಅವರ ಶತಕದಿಂದಾಗಿ ಪಾಕಿಸ್ಥಾನ ವನಿತೆ ಯರು ಬುಧವಾರ ನಡೆದ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 70 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿ ಸ್ಥಾನ ಮುನೀಬಾ ಅವರ ಶತಕದಿಂದಾಗಿ 5 ವಿಕೆಟಿಗೆ 165 ರನ್ ಪೇರಿಸಿತ್ತು. ಮುನೀಬಾ ಅವರು 14 ಬೌಂಡರಿ ನೆರವಿನಿಂದ 102 ರನ್ ಗಳಿಸಿ ದ್ದರಲ್ಲದೇ 3ನೇ ವಿಕೆಟಿಗೆ ನಿದಾ ದಾಸ್ ಜತೆ 101 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡಿ ದ್ದರು. ಇದಕ್ಕುತ್ತರವಾಗಿ ಐರ್ಲೆಂಡ್ ತಂಡವು ಕೇವಲ 95 ರನ್ನಿಗೆ ಆಲೌಟಾಗಿತ್ತು.