Advertisement

Sri Lankan ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ

06:35 PM Oct 29, 2023 | Team Udayavani |

ಚೆನ್ನೈ: ಲಂಕಾ ಪ್ರಾದೇಶಿಕ ಸಮುದ್ರಕ್ಕೆ ದಾರಿ ತಪ್ಪಿ ಹೋದ ನಂತರ ತಮಿಳುನಾಡಿನ 37 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿ ಅವರ ಐದು ಮೀನುಗಾರಿಕೆ ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

Advertisement

ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲೇ 10 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡು, ತಮಿಳುನಾಡಿನ 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ಈ ವಿಷಯವನ್ನು ಕೇಂದ್ರದ ಗಮನಕ್ಕೆ ತಂದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next