Advertisement

ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ರಾಜಪಕ್ಸೆ

05:07 PM Jul 11, 2022 | Team Udayavani |

ಕೊಲಂಬೊ: ಪ್ರತಿಭಟನಾಕಾರರ ಹೆಚ್ಚುತ್ತಿರುವ ಒತ್ತಡದ ನಡುವೆ, ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆಗೆ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ಅವರ ಮಾಧ್ಯಮ ಘಟಕ ಪ್ರಕಟಣೆ ಹೊರಡಿಸಿದೆ.

Advertisement

ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರು ಜು.13 ರಂದು ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಧ್ಯಮಗೋಷ್ಠಿಯಲ್ಲಿ ಘೋಷಿಸಿದ್ದರು.  ಆದರೆ ಶನಿವಾರ ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ರಾಜೀನಾಮೆಗೆ ಆಗ್ರಹಿಸಿದ ಹಿನ್ನೆಲೆ ಸೋಮವಾರ ಅಧಿಕೃತವಾಗಿ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ

ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಆದರೆ, ಶ್ರೀಲಂಕಾ ಅಧ್ಯಕ್ಷರ ಅರಮನೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ತಂಗಿದ್ದು, ಅವರ ಮನೆಯ ಆವರಣದಲ್ಲಿ ಅಡುಗೆ ಮಾಡಿದ್ದಾರೆ. ಜೊತೆಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next