Advertisement

ಸೆ.29 ರಿಂದ ಶ್ರೀ ಮದ್ರಾಂಭಪುರಿ ಸ್ವಾಮೀಜಿಯವರ ಶರನ್ನವರಾತ್ರಿ ಮಹೋತ್ಸವ

02:27 PM Sep 25, 2019 | Team Udayavani |

ದಾವಣಗೆರೆ: ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಸೆ.29 ರಿಂದ ಅ. 8ರವರೆಗೆ ಶ್ರೀ ಮದ್ರಾಂಭಪುರಿ ಸ್ವಾಮೀಜಿಯವರ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ಎಸ್. ವೀರಣ್ಣ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಭಾನುವಾರ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ “ಕೊಲ್ಲಿಪಾಕ” ಕೃತಿ ಬಿಡುಗಡೆ ಮಾಡುವರು.

ಪ್ರತಿ ದಿನ ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ರಂಭಾಪುರಿ ಶ್ರೀಗಳು ಲೋಕ ಕಲ್ಯಾಣಾರ್ಥ ಇಷ್ಟಲಿಂಗ ಮಹಾಪೂಜೆ ನಡೆಸುವುದರ ಜೊತೆಗೆ  ಸಂಜೆ 7ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next