ಬೇಕು ಎಂದು ಆಗ್ರಹಿಸಿ ಬೇರೆ ಬೇರೆಜಿಲ್ಲೆಗಳಿಂದ ಬಂದಿರುವ ಮಕ್ಕಳ ಪೋಷಕರು ಸೋಮವಾರ ಒಟ್ಟಾಗಿ
ಪ್ರಾಂಶುಪಾಲರಿಗೆ ಮನವಿ ಮಾಡಿದ್ದಾರೆ.
Advertisement
2 ವರ್ಷಗಳ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರವು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ತಲಾ 1ರಂತೆ ಶ್ರೀ ನಾರಾಯಣಗುರು ವಸತಿ ಶಾಲೆ ಆರಂಭಿಸಿ ಬಜೆಟ್‌ನಲ್ಲಿ ಪ್ರತೀ 18 ಕೋ.ರೂ. ಘೋಷಿಸಿತ್ತು. ಅಲ್ಲಿ 6ರಿಂದ 10ನೇ ತರಗತಿ ವರೆಗೆ ಶಿಕ್ಷಣ ನೀಡಲಾಗುತ್ತಿದೆ.
Related Articles
– ಶೈಲಾ ಶೇಟ್,
ಪ್ರಭಾರ ಪ್ರಾಂಶುಪಾಲೆ, ಶ್ರೀ ನಾರಾಯಣ ಗುರು ವಸತಿ ಶಾಲೆ
Advertisement
ಶ್ರೀ ನಾರಾಯಣ ಗುರು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಅರಿತು ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಕೋಟೇಶ್ವರದ ಖಾಸಗಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಲಾಗಿತ್ತು. ಆ ಕಟ್ಟಡದಲ್ಲಿ ಸದ್ಯ ಇಂದಿರಾ ಗಾಂಧಿ ವಸತಿ ಶಾಲೆ ನಡೆಯುತ್ತಿದ್ದು, ಅವರು ಸಿದ್ದಾಪುರದಲ್ಲಿ ನಿರ್ಮಾಣಗೊಂಡಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬೇಕಿತ್ತು. ಆದರೆ ಅಲ್ಲಿ ವಿದ್ಯುತ್ ಸಂಪರ್ಕ ವಿಳಂಬವಾಗಿರುವುದು ಸಮಸ್ಯೆಗೆ ಕಾರಣ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು.– ಕಿರಣ್ ಕುಮಾರ್ ಕೊಡ್ಗಿ,
ಶಾಸಕರು, ಕುಂದಾಪುರ