Advertisement

ಋಷಿಗಳಿಗಾಗಿ ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣ

08:29 PM Oct 02, 2022 | Team Udayavani |

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಜತೆಗೆ ಇನ್ನೊಂದು ಬೃಹತ್‌ ದೇಗುಲವನ್ನು ನಿರ್ಮಿಸಲು ನೀಲನಕ್ಷೆ ಸಿದ್ಧಗೊಳ್ಳುತ್ತಿದೆ.

Advertisement

ಹೊಸ ಯೋಜನೆಯಲ್ಲಿ ರಾಮಾಯಣದ ಕಾಲದಲ್ಲಿ ಇದ್ದ ಋಷಿಗಳ ಬಗ್ಗೆ ಮತ್ತೊಂದು ದೇಗುಲವನ್ನು ನಿರ್ಮಿಸುವ ಇರಾದೆಯನ್ನು ಹೊಂದಲಾಗಿದೆ. ಅದಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಯೋಜನೆಯನ್ನು ಕೈಗೆತ್ತಿಕೊಂಡಿದೆ. 1.15 ಲಕ್ಷ ಚದರ ಅಡಿ ಸ್ಥಳದಲ್ಲಿ ಸದ್ಯ ಕಾಮಗಾರಿ ನಿರ್ಮಾಣಗೊಳ್ಳುತ್ತಿದೆ. ಉಳಿದ ಭಾಗದಲ್ಲಿ ಹೊಸ ನಿರ್ಮಾಣ ಕಾರ್ಯ ನಡೆಯಲಿದೆ.

ಹೊಸ ದೇಗುಲದಲ್ಲಿ ಋಷಿಗಳಾದ ವಾಲ್ಮೀಕಿ, ವಸಿಷ್ಠ, ವಿಶ್ವಾಮಿತ್ರ, ಅಗಸ್ತ್ಯ, ನಿಷಾದ ರಾಜ, ಜಟಾಯು, ಶಬರಿಯ ಅಂಶಗಳನ್ನು ಚಿತ್ರಿಸಲಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯರೊಬ್ಬರು ಹೇಳಿದ್ದಾರೆ. ಮಾಸ್ಟರ್‌ ಪ್ಲ್ಯಾನ್ ಪೂರ್ಣಗೊಂಡಿದ್ದು, ಶೀಘ್ರವೇ ಅನುಮೋದನೆಗೊಳ್ಳಲಿದೆ ಎಂದಿದ್ದಾರೆ.

ಇದಲ್ಲದೆ, ಯಜ್ಞ ಮಂಟಪ, ಅನುಷ್ಠಾನ ಮಂಟಪ, ಸಂತರ ನಿವಾಸ, ಸಂಶೋಧನಾ ಕೇಂದ್ರ, ಗ್ರಂಥಾಲಯಗಳನ್ನು ನಿರ್ಮಾಣ ಮಾಡಲೂ ಟ್ರಸ್ಟ್‌ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ “ತೀರ್ಥಯಾತ್ರಿಗಳಿಗೆ ಅಗತ್ಯ ಇರುವ ವ್ಯವಸ್ಥೆಗಳ ನಿರ್ಮಾಣ ಕಾರ್ಯ ಸೇರಿದಂತೆ ಇತರ ಕಾಮಗಾರಿಗಳು ಭರದಿಂದ ಸಾಗಿವೆ. 2023ರ ಡಿಸೆಂಬರ್‌ನಲ್ಲಿ ರಾಮ ಮಂದಿರ ಸಿದ್ಧಗೊಳ್ಳುವ ವೇಳೆಯಲ್ಲಿಯೇ ಅವುಗಳ ಕೆಲಸವೂ ಮುಕ್ತಾಯವಾಗಲಿದೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next