Advertisement

ಶ್ರೀರಾಮ ಸೇನೆ ಸ್ವತಂತ್ರ ಚುನಾವಣೆ ಸ್ಪರ್ಧೆ: ಮುತಾಲಿಕ್‌

12:02 PM Apr 25, 2017 | Harsha Rao |

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕೆಲವು ಕಡೆ ಶ್ರೀರಾಮ ಸೇನೆ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.
2009ರ ಪಬ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಲು ಸೋಮವಾರ ಆಗಮಿಸಿದ ಅವರು ಸುದ್ದಿ ಗಾರರ ಜತೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಶ್ರೀರಾಮ ಸೇನೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲೆಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

Advertisement

ವ್ಯವಸ್ಥಿತ ಸಂಚು
ರಾಜ್ಯದಲ್ಲಿ ಹಿಂದೂ ನಾಯಕರ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದೆ. ಈ ಸಂಚಿನ ಹಿಂದೆ ಪಿಎಫ್‌ಐ ಕೈವಾಡ ಇದೆ. ರಾಜ್ಯ ಸರಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸುವ ಬದಲು ಅದಕ್ಕೆ ಪ್ರೋತ್ಸಾಹಿಸುತ್ತಿದೆ  ಎಂದು ಮುತಾಲಿಕ್‌ ಆರೋ ಪಿಸಿದರು. ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್‌, ಮೂಡಬಿದಿರೆಯ ಪ್ರಶಾಂತ್‌, ಹುಣಸೂರಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕೊಲೆ ಮಾಡಿರುವುದು ಪಿಎಫ್‌ಐ ಸಂಘಟನೆ. ಆದರೆ ಸರಕಾರ ಮೈಸೂರು, ಹಾಸನ, ಶಿವಮೊಗ್ಗಗಳಲ್ಲಿ ಪಿಎಫ್‌ಐ ಮೇಲಿದ್ದ 200ಕ್ಕೂ ಅಧಿಕ ಪ್ರಕರಣಗಳನ್ನು ವಾಪಸ್‌ ಪಡೆದಿದೆ. ಈ ಮೂಲಕ ರಾಜ್ಯದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸರಕಾರವೇ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next