ಮುಂಬಯಿ:ಆಧ್ಯಾತ್ಮಿಕ ಚಿಂತನೆಯನ್ನು ಮೈಗೂಡಿಸಿಕೊಂಡಾಗ ವ್ಯಕ್ತಿಯು ದೈಹಿಕ ಮತ್ತು ಮಾನಸಿಕವಾಗಿ ಪರಿಪೂರ್ಣಗೊಳ್ಳುತ್ತಾನೆ. ಉತ್ತರ ಮುಂಬಯಿಯಲ್ಲಿ ನೆಲೆ ನಿಂತಿರುವ ಶ್ರೀ ಶನಿದೇವರು ಸರ್ವ ಭಕ್ತರ ಕಷ್ಟ, ಕಾರ್ಪಣ್ಯಗಳನ್ನು ಪರಿಹರಿಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಇಲ್ಲಿಗೆ ಹರಿದು ಬರತ್ತಿರುವ ಭಕ್ತ ಸಾಗರವು ಈ ಕ್ಷೇತ್ರವನ್ನು ಊರಿನ ಧಾರ್ಮಿಕ ಉತ್ಸವ ಕ್ಷೇತ್ರವನ್ನಾಗಿ ಪರಿವರ್ತಿಸಿದೆ ಎಂದು ಬ್ರಹ್ಮಲಕಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ| ವಿರಾರ್ ಶಂಕರ್ ಶೆಟ್ಟಿ ನುಡಿದರು.
ಅವರು ಫೆ. 5ರಂದು ಸಂಜೆ ಶ್ರೀ ಶನಿಮಹಾತ್ಮ ಪೂಜಾ ಸಮಿತಿ, ಕೋಟೆ, ನಲಸೋಪಾರ ಇಲ್ಲಿ ನಡೆದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬೆಳಗ್ಗೆ 8ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡು ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ 7 ಗಂಟೆಯಿಂದ ಧಾರ್ಮಿಕ ಸಭೆ ನಡೆಯಿತು. ಮಧ್ಯಾಹ್ನ 1ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ ವಿರಾರ್-ನಲಸೋಪಾರ ಕರ್ನಾಟಕ ಸಂಸ್ಥೆಯ ಸದಸ್ಯರಿಂದ ಭಜನೆ ಹಾಗೂ ನೃತ್ಯ ಕಾರ್ಯಕ್ರಮ ಜರಗಿತು. ಅನಂತರ ಶ್ರೀ ಕಟೀಲು ಯಕ್ಷ ಕಲಾ ವೇದಿಕೆ ಇದರ ಬಾಲಕಲಾವಿದರಿಂದ ಶ್ರೀ ಅಭಿಮನ್ಯು ಕಾಳಗ ತುಳು ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷರುಗಳಾದ ಐಕಳ ಹರೀಶ್ ಶೆಟ್ಟಿ, ಚಂದ್ರಶೇಖರ ಎಸ್. ಪೂಜಾರಿ, ಕರ್ನಿರೆ ವಿಶ್ವನಾಥ ಶೆಟ್ಟಿ, ವಿವಿಎಂಸಿಯ ಮೊದಲ ಮಹಿಳಾ ಮೇಯರ್ ಪ್ರವೀಣಾ ಎಚ್. ಠಾಕೂರ್, ಪಂಕಜ್ ಭಾಸ್ಕರ್ ಠಾಕೂರ್, ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಅಧ್ಯಕ್ಷ ಕೃಷ್ಣ ಕುಮಾರ್ ಎಲ್. ಬಂಗೇರ, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ, ರೆಜೆನ್ಸಿ ಗ್ರೂಪ್ ಆಫ್ ಹೊಟೇಲ್ಸ್‌ನ ಸಿಎಂಡಿ ಜಯರಾಮ ಶೆಟ್ಟಿ, ಬಂಟರ ಸಂಘ ಮುಂಬಯಿಯ ಮಾಜಿ ಕಾರ್ಯದರ್ಶಿ ಸಿಎ ಸದಾಶಿವ ಶೆಟ್ಟಿ, ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಆರ್. ಕೆ. ಶೆಟ್ಟಿ, ಬಂಟರವಾಣಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಉದ್ಯಮಿ ಶ್ಯಾಮ ಅಗರ್ವಾಲ್, ಉದ್ಯಮಿ ಗುರುದೇವ್ ಭಾಸ್ಕರ ಶೆಟ್ಟಿ, ಬಂಟರ ಸಂಘ ಮುಂಬಯಿಯ ಮುಂಡಪ್ಪ ಪಯ್ಯಡೆ, ಬಂಟರ ಸಂಘ ಮುಂಬಯಿ ಇದರ ದಹಿಸರ್ ಜೋಗೇಶ್ವರಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಕನ್ವೇನರ್ ವಿಜಯ್ ಭಂಡಾರಿ, ಮೀರಾ ಭಾಯಂದರ್ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅರವಿಂದ್ ಶೆಟ್ಟಿ, ಬಂಟರ ಸಂಘ ಮುಂಬಯಿ ಸಿಟಿ ರೀಜನ್ ಕಾರ್ಯಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕೈಗಾರಿಕೋದ್ಯಮಿ ಅಶೋಕ್ ಶೆಟ್ಟಿ ಪೆರ್ಮುದೆ, ಜಿ.ಎಸ್. ಪ್ರಧಾನ್, ಗಂಗಾಧರ್ ಅಮೀನ್, ಮಿಲಿಂದ್ ಆರ್. ಮೆಹ್ತಾ, ಬಿಲ್ಲವರ ಅಸೋಸಿಯೇಶ್‌ನ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಉಳ್ಳಾಲ್ ಉಪಸ್ಥಿತರಿದ್ದರು.
ಚಿತ್ರ,ವರದಿ: ರಮೇಶ್ ಉದ್ಯಾವರ್