Advertisement
ಜೋಡುಕಟ್ಟೆಯಿಂದ ಕಾಲ್ನಡಿಗೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಆಕರ್ಷಕ ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆಯಿತು.
ಸಂಜೆ ಎಂಜಿಎಂ ಮೈದಾನದಲ್ಲಿ ನಡೆಯಲಿರುವ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಉಮಾಭಾರತಿ, ಯೋಗ ಪಟು ಬಾಬಾ ರಾಮ್ ದೇವ್, ಶ್ರೀಶ್ರೀ ರವಿಶಂಕರ್ ಗುರೂಜಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಗುಜರಾತ್ ಹಾಗೂ ಉತ್ತರಪ್ರದೇಶ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಅವರು ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿ ಹೇಳಿದೆ.