Advertisement

ವೈಭವದಿಂದ ಜರುಗಿದ ರಾಯರ ಮಧ್ಯಾರಾಧನೆ

06:15 AM Aug 10, 2017 | Team Udayavani |

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 346ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಬುಧವಾರ ಸಹಸ್ರಾರು ಭಕ್ತರ ಸಮ್ಮ ಖದಲ್ಲಿ ವಿಜೃಂಭಣೆಯಿಂದ ಜರುಗಿತು.

Advertisement

ಪ್ರಾತಃಕಾಲದಲ್ಲಿ ನಿರ್ಮಾಲ್ಯ ವಿಸರ್ಜನೆ ನಡೆಸಿದ ನಂತರ ಶ್ರೀ ಉತ್ಸವ ರಾಯರ ಪಾದಪೂಜೆ ನೆರವೇರಿಸಲಾಯಿತು. ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬುಧವಾರ ಬೆಳಗಿನ ಜಾವ ರಾಯರ ಮೂಲ ವೃಂದಾವನಕ್ಕೆ ಮಹಾ ಪಂಚಾಮೃತಾಭಿಷೇಕ ನೆರವೇರಿಸಿದರು.

ವೃಂದಾವನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಿರುಪತಿ ತಿರುಮಲದಿಂದ ತರಲಾದ ಶ್ರೀನಿವಾಸ ದೇವರ ಶೇಷವಸ್ತ್ರಗಳನ್ನು ಶ್ರೀಮಠದ ಪ್ರಾಂಗಣದಲ್ಲಿ ವೈಭವದಿಂದ ಮೆರವಣಿಗೆ ಮಾಡಲಾಯಿತು. ಆನಂತರ ಅವುಗಳನ್ನು ಶ್ರೀ ಸುಬುಧೇಂದ್ರ ತೀರ್ಥರು ತಲೆ ಮೇಲೆ ಹೊತ್ತು ಸಾಗಿ ಶ್ರೀ ರಾಯರ ವೃಂದಾವನಕ್ಕೆ ಸಮರ್ಪಿಸಿದರು. ಬಳಿಕ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.

ಸಂಸ್ಥಾನ ಪೂಜೆ ವೇಳೆ ಶ್ರೀಗಳು ಮೂಲರಾಮದೇವರಿಗೆ ಅಲಂಕಾರ ಸಮರ್ಪಣೆ ಮಾಡಿದರು. ಹಸ್ತೋದಕ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಇನ್ನು ಮಠದ ಪ್ರಾಂಗಣದಲ್ಲಿ ಸಹಸ್ರಾರು ಭಕ್ತರ ಮಧ್ಯೆ ನವರತ್ನ ಖಚಿತ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಚಲನಚಿತ್ರ ನಟ ಜಗ್ಗೇಶ್‌ ದಂಪತಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಹಿರಿಯ ನಟ ದೊಡ್ಡಣ್ಣ ಆಗಮಿಸಿ ರಾಯರ ದರ್ಶನ ಪಡೆದರು. ಕರ್ನಾಟಕ, ತೆಲಂಗಾಣ, ಆಂಧ್ರ ಹಾಗೂ ಮಹಾರಾಷ್ಟ್ರ ಸೇರಿದಂತೆ ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಶ್ರೀ ಸ್ವಾಮಿಗಳ ದರ್ಶನಾಶೀರ್ವಾದ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next