Advertisement
ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶುಕ್ರವಾರ ನಡೆದ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.
Related Articles
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಆಡಳಿತ ಮೊಕ್ತೇಸರ ಶ್ರೀನಿವಾಸ ಉಪಾಧ್ಯ ಮಾತನಾಡಿ, ಮನಸ್ಸಿಗೆ ನೆಮ್ಮದಿ ಕೊಡುವ ತಾಣವೇ ದೇವಸ್ಥಾನ. ನಿತ್ಯ ದೇಗುಲ ಸಂದರ್ಶನದಿಂದ ಮಾನಸಿಕ ಪ್ರಫುಲ್ಲತೆ ಲಭಿಸಲಿದೆ ಎಂದರು.
Advertisement
ಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್, ರಾಜಪುರ ಸಾರಸ್ವತ ಮಹಾಸಭಾದ ಅಧ್ಯಕ್ಷ ಶ್ರೀಶ ನಾಯಕ್, ಉದ್ಯಮಿ ದೇವಿಚರಣ್ ಕಾವಾ, ಹವ್ಯಕ ಬ್ರಾಹ್ಮಣ ಸಂಘದ ಅಧ್ಯಕ್ಷ ಉದಯ ಶಂಕರ್, ಧ.ಗ್ರಾ.ಯೋಜನೆಯ ನಿರ್ದೇಶಕ ಶಿವರಾಯ, ಮನೋಜ್ ಪ್ರಭು, ಮೊಕ್ತೇಸರರಾದ ದಿನೇಶ್ ಪ್ರಭು, ಶುಭಕರ ಸಾಮಂತ್, ದೇಗುಲದ ಶಾಶ್ವತ ಟ್ರಸ್ಟಿ ದಿನೇಶ್ ಶ್ರೀಧರ ಸಾಮಂತ್, ಟ್ರಸ್ಟಿ ಸಂಜಯ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಉಪಸ್ಥಿತರಿದ್ದರು. ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ವಂದಿಸಿ, ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ನಿರೂಪಿಸಿದರು.
ಹಿಂದೂ ಸಂಸ್ಕೃತಿಗೆ ಒತ್ತು ನೀಡಿಹಿಂದೂ ಸಂಸ್ಕೃತಿಯನ್ನು ಉಳಿಸಬೇಕಾದರೆ ಮನೆಯಲ್ಲೇ ಮಕ್ಕಳಿಗೆ ಸಂಸ್ಕಾರ ಹಾಗೂ ಸತ್ಯ ಹೇಳುವುದನ್ನು ಕಲಿಸಬೇಕು. ಮಹಿಳೆಯರು ದೇಶಿ ಸಂಸ್ಕೃತಿಯನ್ನು ಮರೆತರೆ ಮಕ್ಕಳ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯ ಹಿರಿಯರು ಮಕ್ಕಳಿಗೆ ಆದರ್ಶವಾಗಿರಬೇಕು ಎಂದು ಸೂರ್ಯನಾರಾಯಣ ಭಟ್ ಕಶೆಕೋಡಿ ಸಲಹೆ ನೀಡಿದರು.