ಕೊರಟಗೆರೆ: ತಾಲೂಕಿನ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಜೋಳಿಗೆ ಕಾರ್ಯಕ್ರಮದ ಅಡಿಯಲ್ಲಿ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ16 ನೇ ವರ್ಷದ ವಾರ್ಷಿಕೋತ್ಸವದ ಪುಸ್ತಕ ದಾಸೋಹದ ವಾಹನಕ್ಕೆ ಚಾಲನೆ ನೀಡಲಾಯಿತು.
ತೋವಿನಕೆರೆ ಗ್ರಾಮದಲ್ಲಿನ ರಸ್ತೆಗಳಲ್ಲಿ ಸಾರ್ವಜನಿಕರಿಂದ ಪುಸ್ತಕಗಳನ್ನು ಭಾನುವಾರ ಸಂಗ್ರಹಿಸಲಾಯಿತು. 10000 ಪುಸ್ತಕಗಳನ್ನು ಸಂಗ್ರಹಿಸುವ ಯೋಜನೆ ಇದಾಗಿದ್ದು 6000 ಪುಸ್ತಕಗಳನ್ನು ಸಂಗ್ರಹಿಸಿದ್ದು ಇದೇ ೨೩ರಂದು ನಡೆಯುವ 16 ನೇ ವಾರ್ಷಿಕೋತ್ಸವದಂದು ಭಕ್ತರಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಕೊರಟಗೆರೆ ತಾಲೂಕು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಸಂಘದವರು ಚನ್ನರಾಯನದುರ್ಗ ಹೋಬಳಿಯ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಸಾವಿರಾರು ಪುಸ್ತಕಗಳನ್ನು ಸಂಗ್ರಹ ಮಾಡಿದರು.
ಈ ಸಂದರ್ಭದಲ್ಲಿ ಸಿದ್ದಗಿರಿ ನಂಜುಂಡಸ್ವಾಮಿ, ಈರಣ್ಣ, ಶಿವಶಂಕರ್, ಟಿ.ಎಲ್.ಸಿದ್ದಲಿಂಗಯ್ಯ, ದೊಡ್ಡೇಗೌಡ, ಜಿ.ಬಿ.ರಾಮಕೃಷ್ಣಪ್ಪ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಸಂಘದ ಅಧ್ಯಕ್ಷ ಪಿ.ಹೆಚ್.ದಯಾನಂದಸ್ವಾಮಿ, ಎಂ.ತಿಮ್ಮರಾಜು, ತಿಮ್ಮರಾಜಮ್ಮ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.