Advertisement

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

09:32 AM May 21, 2022 | Team Udayavani |

“ಕೆಜಿಎಫ್-2′ ಸಿನಿಮಾದ ಸೂಪರ್‌ ಹಿಟ್‌ ಸಕ್ಸಸ್‌ ಬಳಿಕ ಬ್ಯಾಕ್‌ ಟು ಬ್ಯಾಕ್‌ ಹೊಸ ಸಿನಿಮಾಗಳನ್ನು ಅನೌನ್ಸ್‌ ಮಾಡುತ್ತಿರುವ “ಹೊಂಬಾಳೆ ಫಿಲಂಸ್‌’, ಶುಕ್ರವಾರ ತನ್ನ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸಚಿತ್ರ “ಬಘೀರ’ದ ಮುಹೂರ್ತವನ್ನು ಸರಳವಾಗಿ ನೆರವೇರಿಸಿದೆ.

Advertisement

ಇನ್ನು “ಮದಗಜ’ ಸಿನಿಮಾದ ಬಳಿಕ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ಅಭಿನಯಿಸುತ್ತಿರುವ “ಬಘೀರ’ ಚಿತ್ರಕ್ಕೆ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಶ್ರೀಪಂಚಮುಖೀ ಗಣಪತಿ ದೇವಸ್ಥಾನದಲ್ಲಿ “ಬಘೀರ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಸಿನಿಮಾದ ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್‌ ಕಿರಗಂದೂರು ಅವರ ಸಹೋದರ ಮಂಜುನಾಥ್‌ ಕ್ಲಾಪ್‌ ಮಾಡಿದರೆ, ನಿರ್ದೇಶಕ ಡಾ. ಸೂರಿ ಅವರ ತಾಯಿ ಸರೋಜಾ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಈ ಹಿಂದೆ ಪ್ರಶಾಂತ್‌ ನೀಲ್‌ ನಿರ್ದೇಶನದಲ್ಲಿ ಶ್ರೀಮುರಳಿ ನಾಯಕರಾಗಿ ನಟಿಸಿದ್ದ “ಉಗ್ರಂ’ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದ ಡಾ. ಸೂರಿ ಈ ಸಿನಿಮಾದಲ್ಲಿ ಶ್ರೀಮುರಳಿ ಅವರಿಗೆ ಮೊದಲ ಬಾರಿಗೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. “ಬಘೀರ’ ಸಿನಿಮಾದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದು, ಎ. ಜೆ ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್‌ ಕಲಾ ನಿರ್ದೇಶನವಿದೆ.

ಹಿಂದೆ ಬಿಡುಗಡೆಯಾಗಿದ್ದ “ಬಘೀರ’ ಸಿನಿಮಾದ ಫ‌ಸ್ಟಲುಕ್‌ ಸೋಶಿಯಲ್‌ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿತ್ತು. “ಬಘೀರ’ ಸಿನಿಮಾ ಯಾವಾಗ ಶುರುವಾಗುತ್ತದೆ? ಎಂಬ ಕಾತುರದಲ್ಲಿದ್ದ ಶ್ರೀಮುರಳಿ ಅಭಿಮಾನಿಗಳಿಗೆ ಈಗ “ಬಘೀರ’ನ ಕಡೆಯಿಂದ ಹೊಸ ಅಪ್ಡೇಟ್‌ ಸಿಕ್ಕಂತಾಗಿದೆ.

“ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಅವರೊಂದಿಗೆ ರಂಗಾಯಣ ರಘು, ಅಚ್ಯುತಕುಮಾರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ “ಬಘೀರ’ ಸಿನಿಮಾದ ಮುಹೂರ್ತ ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಮೇ ಕೊನೆಯ ವಾರದಿಂದ ಪೂರ್ಣ ಪ್ರಮಾಣದಲ್ಲಿ ಚಿತ್ರೀಕರಣ ಆರಂಭಿಸಲಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next