Advertisement

ಸಿರಿನಾಡ ವೆಲ್‌ಫೇರ್‌ ಅಸೋಸಿಯೇಶನ್‌ ಮಹಿಳಾ ವಿಭಾಗ: ಅರಸಿನ ಕುಂಕುಮ

03:08 PM Feb 22, 2019 | Team Udayavani |

ಡೊಂಬಿವಲಿ: ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಡೊಂಬಿವಲಿ ಪಶ್ಚಿಮದ ಕ್ಷಿತಿಜ ವಿಕಲಚೇತನ ಶಾಲಾ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

Advertisement

ಮಹಿಳಾ ವಿಭಾಗದ ಸದಸ್ಯೆ ಸರಸ್ವತಿ ಶೆಟ್ಟಿ ಪ್ರಾರ್ಥನೆಗೈದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಉದಯಾ ಜೆ. ಶೆಟ್ಟಿ ಸ್ವಾಗತಿಸಿದರು. ವಿಭಾಗದ ಪದಾಧಿಕಾರಿಗಳು ಅತಿಥಿ-ಗಣ್ಯರುಗಳನ್ನು ಅಭಿನಂದಿಸಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಆರ್‌. ಕೆ. ಸುವರ್ಣ ಮಾತನಾಡಿ, ಸಂಸ್ಥೆಯ ಮಹಿಳಾ ವಿಭಾಗದ ವತಿಯಿಂದ ಆಚರಿಸುತ್ತಿರುವ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿಯಾಗಿದೆ. ಇದು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿ ಮಹಿಳಾ ವಿಭಾಗದ ಸಂಘಟನಾತ್ಮಕ ಶಕ್ತಿಯನ್ನು ಬಿಂಬಿಸುತ್ತದೆ. ನಾವು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಇಂತಹ ನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಧಾರ್ಮಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಒತ್ತು ನೀಡುವುದಲ್ಲದೆ, ಯುವ ಪೀಳಿಗೆಗೆ ಇದರ ಮಹತ್ವವನ್ನು ತಿಳಿಸಿಕೊಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಮರಾಠಿ ಮಣ್ಣಿನಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಅರಸಿನ ಕುಂಕುಮ ಕಾರ್ಯಕ್ರಮವನ್ನು ಆಚರಿಸುವುದರಿಂದ ಮಣ್ಣಿನ ಸಂಸ್ಕೃತಿಯನ್ನು ಗೌರವಿಸಿದಂತಾಗುತ್ತದೆ. ಸಂಘದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘಟನೆಯನ್ನು ಬಲಪಡಿಸಬೇಕು. ಮಹಿಳಾ ವಿಭಾಗದ ಕಾರ್ಯಕ್ರಮಗಳಿಗೆ ನಮ್ಮ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದು ನುಡಿದು ಶುಭಹಾರೈಸಿದರು.

ಗೌರವ ಅತಿಥಿಯಾಗಿ ಆಗಮಿಸಿದ ಕರ್ನಾಟಕ ಸಂಘ ಡೊಂಬಿವಲಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ದಿವಾಕರ ಶೆಟ್ಟಿ ಅವರು ಮಾತನಾಡಿ, ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನ ಕಾರ್ಯಕ್ರಮಗಳನ್ನು ಹತ್ತಿರದಿಂದ ಬಲ್ಲವಳಾಗಿದ್ದೇನೆ. ಧಾರ್ಮಿಕ ವೈಜ್ಞಾನಿಕವಾಗಿ ಮಹತ್ವವನ್ನು ಪಡೆದಿರುವ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದು ಪ್ರಶಂಸನೀಯ. ಮಹಿಳೆಯರು ಸಾಂಸಾರಿಕ ಜೀವನದ ಒತ್ತಡದ ನಡುವೆ ಸಿಕ್ಕಿದ ಸಮಯವನ್ನು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ವೈವಾಹಿಕ ಜೀವನದ 60 ರ ಸಂಭ್ರಮವನ್ನು ಆಚರಿಸಿಕೊಂಡ ಕಮಲಾ ಕೆ. ಪೂಜಾರಿ ದಂಪತಿಯನ್ನು ವೇದಿಕೆಯಲ್ಲಿದ್ದ ಗಣ್ಯರು, ಪದಾಧಿಕಾರಿಗಳು ಸಮ್ಮಾನಿಸಿ ಗೌರವಿಸಿದರು. ಮಹಿಳಾ ವಿಭಾಗದ ಸದಸ್ಯೆ, ಮಾಜಿ ಜೊತೆ ಕಾರ್ಯದರ್ಶಿ ಹೇಮಾ ಸಾಲ್ಯಾನ್‌ ಇವರು ಸಮ್ಮಾನಿತರನ್ನು ಪರಿಚಯಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಜಗದೀಶ್‌ ನಿಟ್ಟೆ ಮತ್ತು  ದೀಪಾ ಜಗದೀಶ್‌ ದಂಪತಿಯಿಂದ ಸಂಗೀತ ರಸಮಂಜರಿ ನಡೆಯಿತು.

Advertisement

ವೇದಿಕೆಯಲ್ಲಿ ಸಂಸ್ಥೆಯ ಸಲಹೆಗಾರರಾದ ಇಂದ್ರಾಳಿ ದಿವಾಕರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಶೆಟ್ಟಿ, ಉಪಾಧ್ಯಕ್ಷೆ ದಿವ್ಯಾ ಶೆಟ್ಟಿ, ಕಾರ್ಯದರ್ಶಿ ಶೋಭಾ ಟಿ. ಪೂಜಾರಿ, ಜತೆ ಕಾರ್ಯದರ್ಶಿ ಚಿತ್ರಾ ಆರ್‌. ಸಾಲ್ಯಾನ್‌, ಕೋಶಾಧಿಕಾರಿ ದೇವಕಿ ಎನ್‌. ಬಂಗೇರ, ಜೊತೆ ಕೋಶಾಧಿಕಾರಿ ಸುಮಂಗಲಾ ಡಿ. ಸುವರ್ಣ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ ಉಪಸ್ಥಿತರಿದ್ದರು.

ಸೇರಿದ್ದ ನೂರಾರು ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು. ಪಾಲ್ಗೊಂಡ ಮಹಿಳೆಯರಿಗೆ ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next