Advertisement

ಕೋವಿಡ್ ತಡೆಗೆ ಸರ್ಕಾರಿ ನಿಯಮ ಪಾಲಿಸಲು ಸಲಹೆ

07:04 PM May 15, 2020 | Naveen |

ಶೃಂಗೇರಿ: ಸರಕಾರ ರೂಪಿಸಿರುವ ನಿಯಮವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಮಾತ್ರ ಕೋವಿಡ್ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ತಾಪಂ ಅಧ್ಯಕ್ಷೆ ಜಯಶೀಲ ಹೇಳಿದರು.

Advertisement

ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೋವಿಡ್‌-19 ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಮಟ್ಟದಿಂದ ನಿಯಮವನ್ನು ಅನುಸರಿಸಬೇಕಾಗಿದ್ದು, ಪ್ರತಿಯೊಬ್ಬರಿಗೂ ಮಾಸ್ಕ್ ನ್ನು ಉಚಿತವಾಗಿ ವಿತರಿಸಬೇಕು. ರಾಜ್ಯ ಹಾಗೂ ಹೊರ ರಾಜ್ಯದಿಂದ ಜನರು, ಕಾರ್ಮಿಕರು, ಉದ್ಯೋಗಸ್ಥರು ಹಳ್ಳಿ ಕಡೆಗೆ ಬರುತ್ತಿದ್ದು ಇವರ ಬಗ್ಗೆ ಕೂಡಲೇ ತಾಲೂಕು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹೊರಗಿನಿಂದ ಬಂದವರ ಹಾಗೂ ಅವರ ಕುಟುಂಬದ ಸದಸ್ಯರೆಲ್ಲರ ಆರೋಗ್ಯ ತಪಾಸಣೆ ನಡೆಸಿ, ಅವರನ್ನು 28 ದಿನಗಳ ಹೋಂ ಕ್ವಾರಂಟೈನ್‌ ಇರಿಸುವುದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಅವರು ಮನೆಯಿಂದ ಹೊರಬಾರದಂತೆ ಎಚ್ಚರಿಕೆ ಕೊಡುವುದಲ್ಲದೇ ನಿಗಾ ವಹಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಪ್ರವೀಣ್‌ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ವೈರಸ್‌ ಬಂದಿರುವುದು ಧೃಡಪಟ್ಟಿರುವುದರಿಂದ ನಾವು ತೀವ್ರ ನಿಗಾ ವಹಿಸಬೇಕು ಎಂದರು. ತಾಪಂ ಇಒ ಸುದೀಪ್‌ ಮಾತನಾಡಿದರು. ತಾಪಂ ಉಪಾಧ್ಯಕ್ಷೆ ಚಂದ್ರಮತಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next