ಶೃಂಗೇರಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಹೆಚ್ಚಿನ ಆದ್ಯತೆ ನೀಡಿದ್ದು, ಈ ಬಾರಿ ನಡೆಯುವ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಪಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್,ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ, ಮುಖಂಡರಾದ ವಿಜಯಕುಮಾರ್, ಅಭ್ಯರ್ಥಿಗಳಾದ ಉಮೇಶ್ ಪುದುವಾಳ್ ,ಲತಾ, ಆಶಾಶೆಟ್ಟಿ, ಸೌಮ್ಯವಿಜಯಕುಮಾರ್ ಇನ್ನಿತರರಿದ್ದರು.
Advertisement
ಸೋಮವಾರ ಪಪಂ ವ್ಯಾಪ್ತಿಯ ವಿವಿಧ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಈ ಬಾರಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ನೀಡುವ ವಿಶ್ವಾಸವಿದೆ.ಶ್ರೀಮಠಕ್ಕೆ ಬರುತ್ತಿರುವ ಸಹಸ್ರಾರು ಭಕ್ತರನ್ನು ಗಮನದಲ್ಲಿಟ್ಟುಕೊಂಡು ಸ್ವಚ್ಛ ಶೃಂಗೇರಿ ಮಾಡುವುದು ಕಾಂಗ್ರೆಸ್‌ನ ಮೊದಲ ಆದ್ಯತೆಯಾಗಿದೆ. ಪಟ್ಟಣದ ಅಭಿವೃದ್ಧಿಗೆ ಸರಕಾರ ಈ ಬಾರಿ ಹೆಚ್ಚಿನ ಅನುದಾನ ನೀಡಿದ್ದು, ಇದರಿಂದ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.
ಪುರಸಭೆ17 ನಾಮಪತ್ರ ವಾಪಸ್:
ಮೂಡಿಗೆರೆ: ಮೇ.29ರಂದು 11 ವಾರ್ಡ್‌ಗೆ ನಡೆಯುವ ಪಪಂ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಸೇರಿದಂತೆ ಒಂಭತ್ತು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಜೆಡಿಎಸ್‌ನ ಹಮ್ಮಬ್ಬ, ಮುಕ್ತಿಯಾರ್‌ಹುಸೇನ್ ಸೇರಿದಂತೆ 9 ಮಂದಿ ನಾಮಪತ್ರ ಹಿಂಪಡೆದಿದ್ದಾರೆ. ಒಟ್ಟು 49 ಅಭ್ಯರ್ಥಿಗಳು 68 ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 22 ನಾಮಪತ್ರ ತಿರಸ್ಕೃತಗೊಂಡು 14 ಪಕ್ಷೇತರರು ನಾಮಪತ್ರ ಸಲ್ಲಿಸಿದ್ದು ಇದರಲ್ಲಿ 7 ಪಕ್ಷೇತರರು ನಾಮಪತ್ರ ಹಿಂಪಡೆದಿದ್ದರಿಂದ 7 ಪಕ್ಷೇತರ ಸಹಿತ ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 11 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಉಳಿಸಿಕೊಂಡರೆ, ಜೆಡಿಎಸ್‌ನ 10 ಅಭ್ಯರ್ಥಿಗಳ ಪೈಕಿ 2 ಇಬ್ಬರು ನಾಮಪತ್ರ ಹಿಂಪಡೆದು 8 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಡೂರು: ಮೇ.29ರಂದು ಕಡೂರು ಪುರಸಭೆಗೆ ನಡೆಯುವ ಚುನಾವಣೆಗೆ ಅಂತಿಮವಾಗಿ 23 ವಾರ್ಡ್‌ಗಳಿಂದ 89 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಡಾ| ದೇವರಾಜನಾಯ್ಕ, ರಾಜಪ್ಪ ತಿಳಿಸಿದ್ದಾರೆ. ಸೋಮವಾರ ಉಮೇದುವಾರಿಕೆ ಹಿಂಪಡೆಯಲು ಕಡೆ ದಿನವಾಗಿತ್ತು. 17 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ನಂತರ 23 ವಾರ್ಡ್‌ಗಳಿಂದ 89 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ತಿಳಿಸಿದ್ದಾರೆ.
ಕಣದಿಂದ ಹಿಂದೆ ಸರಿದ 8 ಅಭ್ಯರ್ಥಿಗಳು:ಶೃಂಗೇರಿ ಮೇ.29 ರಂದು 11 ವಾರ್ಡ್‌ಗಳಿಗೆ ನಡೆಯುವ ಪಟ್ಟಣ ಪಂಚಾಯತ್ ಚುನಾವಣೆಯ ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು ಉಳಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ ವಾರ್ಡ್‌ನಲ್ಲೂ ಸ್ಪರ್ಧೆ ಮಾಡಿದ್ದು, 1ನೇ ವಾರ್ಡ್‌ನಲ್ಲಿ ಜೆಡಿಎಸ್ ಹಾಗೂ ಇಬ್ಬರು ಪಕ್ಷೇತರರು ಸ್ಪರ್ಧೆ ಮಾಡಿದ್ದಾರೆ. ಒಟ್ಟು 33 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 8 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.