ಶೃಂಗೇರಿ: ಕೋವಿಡ್ ನಿಂದಾಗಿ ರಾಜ್ಯದಲ್ಲಿ ಮುಂದೂಡಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂ. 25 ರಂದು ನಡೆಯಲಿದ್ದು, ಅದಕ್ಕಾಗಿ ತಾಲೂಕಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಪಾಲಿಗೆ ಹಬ್ಬದ ವಾತಾವರಣದ ಬದಲಿಗೆ ಗೊಂದಲಮಯವಾಗಿ ಮಾರ್ಪಟ್ಟಿದೆ. ಲಾಕ್‌ಡೌನ್ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ಮಾತ್ರ ಇನ್ನೂ ಪರೀಕ್ಷೆ ಬಗ್ಗೆ ತಯಾರಿ ನಡೆಸಿಲ್ಲ ಎಂಬುದು ಆತಂಕಪಡುವಂತಾಗಿದೆ.
ಪ್ರತಿಕ್ರಿಯೆ: ಸರ್ಕಾರ ಪ್ರಸಕ್ತ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ನಡೆಸದಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಬೇಕಿದೆ. ಈಗಾಗಲೇ ತೆಲಂಗಾಣ, ತಮಿಳುನಾಡು, ಪುದುಚರಿ ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದು ಮಾಡಿವೆ. ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯ ಮಾಪನದ ಅಂಕಗಳು ಮತ್ತು ಸೆಮಿಸ್ಟರ್ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಮುಂದಿನ ಹಂತಕ್ಕೆ ತೇರ್ಗಡೆ ಮಾಡುವುದು ಸೂಕ್ತ ಎಂದು ಪೋಷಕ ತಿಮ್ಮಯ್ಯ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಪರೀಕ್ಷಾ ತಯಾರಿ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷೆ ಮತ್ತು ಆತ್ಮವಿಶ್ವಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಎನ್.ಜಿ.ರಾಘವೇಂದ್ರ,
ಬಿಇಒ, ಶೃಂಗೇರಿ