Advertisement
ಅಂದು ಸರ್ಕಾರ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ಕಟ್ಟಿದ್ದ 30 ಹಾಸಿಗೆಯುಳ್ಳ ಸಾರ್ವಜನಿಕ ಆಸ್ಪತ್ರೆ ಇದೀಗ ಸೂಕ್ತ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಸುತ್ತಲೂ ಬೆಳೆದಿರುವ ಪೊದೆಗಳು, ಗಿಡಗಂಟಿಗಳು ಸುತ್ತೆಲ್ಲಾ ಹರಡಿ ಭೂತ ಬಂಗಲೆಯಂತೆ ಕಂಡು ಬರುತ್ತಿದ್ದ ಯಾರಿಗೂ ಉಪಯೋಗಕ್ಕೆ ಬಾರದ ಸ್ಥಿತಿ ನಿರ್ಮಾಣವಾಗಿದೆ. 2007ರಲ್ಲಿ ವಿದ್ಯಾರಣ್ಯಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ತಾಲೂಕು ಪಂಚಾಯ್ತಿ ಸಮೀಪ ಸಾರ್ವಜನಿಕ ಆಸ್ಪತ್ರೆ ಸ್ವಂತ ಕಟ್ಟಡ ಹೊಂದಿದ ಮೇಲೆ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಕಟ್ಟಡವನ್ನು ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿ ನಿಲಯಕ್ಕಾಗಿ, ಬಾಡಿಗೆಗಾಗಿ ನೀಡಲಾಗಿತ್ತು. 10 ವರ್ಷಗಳ ಕಾಲ ಬಳಸುತ್ತಿದ್ದ ವಿದ್ಯಾರ್ಥಿನಿಯರ ಹಾಸ್ಟೆಲ್ ತದನಂತರ ಶೃಂಗೇರಿ ಆಗುಂಬೆ ರಸ್ತೆಯ ನೇರಳೆಕುಡಿಗೆ ಬಳಿ ಸ್ವಂತ ಕಟ್ಟಡ ನಿರ್ಮಿಸಲಾಯಿತು.
Related Articles
Advertisement
ಅಲ್ಲಲ್ಲಿ ಹೆಂಚುಗಳು ಒಡೆದು ಹೋಗಿದ್ದು, ಮಳೆಯ ನೀರು ಕಟ್ಟಡದ ಒಳಗೆ ಬೀಳುವುದರಿಂದ ಅಲ್ಲಲ್ಲಿ ಗೋಡೆ ಜಖಂಗೊಂಡಿದೆ. ಕೆಲವು ಬಾಗಿಲುಗಳು ಗೆದ್ದಲು ಹಿಡಿದು ಈಗಲೋ ಆಗಲೋ ಮುರಿದು ಬೀಳುವ ಸ್ಥಿತಿ ತಲುಪಿದೆ ಹೊರ ಆವರಣದಲ್ಲಿ ಅಳವಡಿಸಿದ್ದ ಜಾಹೀರಾತು ಫಲಕದ ಕಬ್ಬಿಣದ ಸರಳುಗಳು ತುಕ್ಕು ಹಿಡಿದು ಅಪಾಯಕಾರಿಯಾಗಿ ಪರಿಣಮಿಸಿದೆ. ಆಸ್ಪತ್ರೆಯ ಹಿಂದೆ ತುಂಗಾನದಿ ಹರಿಯುತ್ತಿರುವುದರಿಂದ ಆಸ್ಪತ್ರೆಗೆ ನೀರಿನ ಕೊರತೆ ಇಲ್ಲ ವಸತಿ ಗೃಹಕ್ಕೆ ಬಳಸಿಕೊಳ್ಳಲು ಸುಸಜ್ಜಿತವಾಗಿದೆ.
ಇನ್ನಾದರೂ ಇಲಾಖೆ ಗಮನಹರಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಲೀ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಸುಸಜ್ಜಿತ ಕಟ್ಟಡ ಪಾಳು ಬಿದ್ದಿರುವುದು ನಾಚಿಕೆಗೇಡಿನ ಸಂಗತಿ. ಒಂದು ಕಾಲದಲ್ಲಿ ಆಸ್ಪತ್ರೆಯಲ್ಲಿ ಜನಜಂಗುಳಿಯಿಂದ ಕೂಡಿದ್ದು, ಇದೀಗ ಯಾರಿಗೂ ಬೇಡದ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿ ಕಾರಿಗಳು ಪಾಳು ಬಿದ್ದಿರುವ ಕಟ್ಟಡಕ್ಕೆ ಕಾಯಕಲ್ಪ ಕೊಡಬೇಕಿದೆ.ವಿನೇಶ್ ಕಾಮತ್,
ಉದ್ಯಮಿ ಶೃಂಗೇರಿ. ಪಾಳು ಬಿದ್ದ ಕಟ್ಟಡದ ಬಗ್ಗೆ ಗಮನಕ್ಕೆ ಬಂದಿದ್ದು, ಕಟ್ಟಡ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಬಳಕೆಗೆ ಬಳಸಿಕೊಳ್ಳಲು ಚಿಂತಿಸಲಾಗುತ್ತಿದೆ. ಜಿಪಂ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು.
ಬಿ.ಶಿವಶಂಕರ್,
ಜಿ.ಪಂ ಸದಸ್ಯರು. ಆಸ್ಪತ್ರೆಯ ವಶದಲ್ಲಿರುವ ಈ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರ ದುರಸ್ತಿ ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಬಳಕೆಗೆ ಅವಕಾಶ ಮಾಡಿಕೊಡಬೇಕಾಗಿದೆ.
ಡಾ. ಮಂಜುನಾಥ್,
ಹಿರಿಯ ವೈದ್ಯಾಧಿಕಾರಿ, ಸಾರ್ವಜನಿಕ ಆಸ್ಪತ್ರೆ ರಮೇಶ ಕರುವಾನೆ