Advertisement

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

07:18 PM Oct 28, 2021 | Team Udayavani |

ಕಾಪು : ಕನ್ನಡದಲ್ಲೇ ಸಹಿ ಹಾಕುವ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವುದು ಸ್ವಾಗತಾರ್ಹವಾಗಿದ್ದು ನಾನು ಕಳೆದ ಎಂಟು ವರ್ಷಗಳಿಂದಲೂ ಕನ್ನಡದಲ್ಲೇ ಸಹಿ ಮಾಡುತ್ತಿದ್ದೇನೆ ಎಂದು ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹೇಳಿದರು.

Advertisement

ಕರ್ನಾಟಕ ರಾಜ್ಯೋತ್ಸವ ಕ್ಕೆ ಪೂರ್ವಭಾವಿಯಾಗಿ ಗುರುವಾರ ಕಾಪುವಿನಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಕನ್ನಡವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವ ಅಗತ್ಯವಿದೆ ಎಂದರು.

ಕರ್ನಾಟಕ ರಾಜ್ಯೋತ್ಸವದ ಹಿನ್ನೆಯಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿದ ಆದೇಶದ ಪ್ರಕಾರ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮಾರ್ಗದರ್ಶನದಂತೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ಮೂರು ಗೀತೆಗಳನ್ನು ಸಾಮೂಹಿಕ ಗೀತ ಗಾಯನ ಕಾರ್ಯಕ್ರಮದ ಮೂಲಕವಾಗಿ ಹಾಡಲಾಗಿದೆ. ಈ ಕಾರ್ಯಕ್ರಮ ಸಂಯೋಜನೆಯಲ್ಲಿ ಗುರುಚರಣ್ ಅವರು ಪೂರ್ಣ ಸಹಕಾರ ನೀಡಿದ್ದು, ಎಲ್ಲಾ ಇಲಾಖೆಗಳೂ ನಮ್ಮೊಂದಿಗೆ ಕೈ ಜೋಡಿಸಿವೆ ಎಂದರು.

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಜಾನಪದ ಕಲಾವಿದ ಗುರು ಚರಣ್ ಪೊಲಿಪು ಮಾತನಾಡಿ, ಕಾಪುವಿನ ಎಲ್ಲಾ ಶಾಲೆಗಳಿಗೆ ತೆರಳಿ ನಾವು ರಿಹರ್ಸಲ್ ಮಾಡಿಸಿದ್ದು, ಇದರೊಂದಿಗೆ ಅಟೋ ಚಾಲಕರು ಸಹಿತ 8೦೦ಕ್ಕಿಂತಲೂ ಹೆಚ್ಚಿನ ಜನರು ಸಮೂಹ ಗಾಯನದಲ್ಲಿ ಭಾಗಿಯಾಗಿದ್ದಾರೆ ಎಂದರು.

Advertisement

ಇದನ್ನೂ ಓದಿ :ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

ಉಪತಹಶೀಲ್ದಾರ್ ಗಳಾದ ರವಿಶಂಕರ್, ಚಂದ್ರಹಾಸ ಭಂಡಾರಿ, ಅಶೋಕ್ ಕೋಟೆಕಾರ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಕಂದಾಯ ನಿರೀಕ್ಷಕ ಸುದೀರ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next