Advertisement
ಶುಕ್ರವಾರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲು ನಿರ್ಧರಿಸಲಾಯಿತು.
Related Articles
ಕೋಟಾ ಶ್ರೀನಿವಾಸ ಪೂಜಾರಿ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಮೂರನೇ ಬಾರಿ ಆಯ್ಕೆಯಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
Advertisement
ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಅರುಣ್ ಶಹಾಪುರ ಅವರು ಆಕಾಂಕ್ಷಿಯಾಗಿದ್ದರಾದರೂ ಕೋರ್ ಕಮಿಟಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಅವಕಾಶ ಕೊಡಲು ತೀರ್ಮಾನಿಸಲಾಯಿತು. ಸಂಸದೆ ಶೋಭಾ ಕರಂದ್ಲಾಜೆ ಆವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಪ್ರತಿಪಕ್ಷ ನಾಯಕಿ ಮಾಡುವ ಮಾತುಗಳು ಕೇಳಿ ಬಂದಿದ್ದವಾದರೂ ಶೋಭಾ ಕರಂದ್ಲಾಜೆ ಅವರು ಆ ಬಗ್ಗೆ ಆಸಕ್ತಿ ತೋರಲಿಲ್ಲ ಎಂದು ಹೇಳಲಾಗಿದೆ.
ಬಿಜೆಪಿ ನಾಯಕರು ಯಾರೂ ಸಮ್ಮಿಶ್ರ ಸರ್ಕಾರ ಬಿಜೆಪಿಯ ನಿಲುವು ಕುರಿತು ಬಹಿರಂಗವಾಗಿ ಹೇಳಿಕೆ ಕೊಡಬಾರದು.ಗೊಂದಲ ಮೂಡಿಸುವಂತ ಹೇಳಿಕೆಗಳಿಗೆ ಕಡಿವಾಣ ಹಾಕಿಕೊಳ್ಳಿ.ನಾವು ಪ್ರತಿ ಹೆಜ್ಜೆಯನ್ನೂ ಸೂಕ್ಷ್ಮವಾಗಿ ಇಡಬೇಕಾಗಿದೆ. ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವಾಗ ಆದಷ್ಟೂ ಜಾಗರೂಕತೆ ವಹಿಸಿ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ