Advertisement
ಅಮೆರಿಕದ ಸಂಸತ್ ಪ್ರತಿನಿಧಿಗಳ ಚುನಾವಣೆಯಲ್ಲಿ ಮಿಚಿಗನ್ ರಾಜ್ಯದಿಂದ ಸ್ಪ ರ್ಧಿಸಿದ್ದ ಬೆಳಗಾವಿಯ ಶ್ರೀನಿವಾಸ ಸಾಹಿತಿ, ವಿಜ್ಞಾನಿ ಹಾಗೂ ಅಮೆರಿಕದ ಪ್ರಖ್ಯಾತ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ.
ಬೆಳಗಾವಿಯ ಶಹಾಪುರದ ಮೀರಾಪುರ ಗಲ್ಲಿಯಲ್ಲಿ ವಾಸವಿದ್ದರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಬೆಳಗಾವಿಯ ಚಿಂತಾಮಣರಾವ್ ಸರ್ಕಾರಿ ಪದವಿ ಪೂರ್ವ ಶಾಲೆಯಲ್ಲಿ ಪೂರ್ಣಗೊಳಿಸಿದ ಶ್ರೀನಿವಾಸ ಅವರು ಕರ್ನಾಟಕ ವಿಶ್ವವಿದ್ಯಾಲದಿಂದ ಬಿಎಸ್ಸಿ ಪದವಿ ಪಡೆದಿದ್ದಾರೆ. 1977ರಲ್ಲಿ ಬಾಂಬೆ ವಿಶ್ವವಿದ್ಯಾಲಯದಿಂದ ರಸಾಯನ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಶ್ರೀನಿವಾಸ್, 1979ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಮುಂದೆ 1982ರಲ್ಲಿ ಪಾಲಿಮರ್ ಕೆಮಿಸ್ಟ್ರಿ ವಿಷಯದಲ್ಲಿ ಪಿಎಚ್ಡಿ ಪದವಿ ಗಳಿಸಿದ ನಂತರ 1982ರಿಂದ 1984ರವೆಗೆ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸಿದ್ದರು. 1984ರಿಂದ 1990ರವರೆಗೆ ಪಾಲಿಮರ್ ಸಿಂಥೆಸಿಸ್ ಕೆಮಿಸ್ಟ್ ಹಾಗೂ ಪ್ರಾಜೆಕ್ಟ್ ಲೀಡರ್ ಆಗಿ ಪೆಟ್ರೊಲೈಟ್ ಕಾರ್ಪೊರೇಷನ್ನಲ್ಲಿ ಕಾರ್ಯನಿರ್ವಹಿಸಿದ ನಂತರ ತಮ್ಮದೇ ಸ್ವಂತ ಉದ್ಯಮ ಆರಂಭಿಸಿದ್ದರು.
Related Articles
Advertisement