ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‍ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ 2021-22 ನೇ ಸಾಲಿನ ಪದವಿ ಪರೀಕ್ಷೆಯ ಬಿಬಿಎ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಿಎಂ ಧನುಷ್ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ಅಖಿಲೇಶ್ ಪಿ. 2ನೇ ರ‍್ಯಾಂಕ್ ಪಡೆದಿರುತ್ತಾರೆ.
ಬಿಬಿಎ ಪೋರ್ಟ್ ಶಿಪ್ಪಿಂಗ್ ಮ್ಯಾನೇಜ್ಮೆಂಟ್ ಮತ್ತು ಲಾಜಿಸ್ಟಿಕ್ಸ್ ವಿಭಾಗದಲ್ಲಿ ವಿಷ್ಣು ವಿನೋದ್ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ಧೀರಜ್ 2ನೇ ರ‍್ಯಾಂಕ್, ಚಾರ್ಲ್ಸ್ ಕೆ. ಸಿ. 3ನೇ ರ‍್ಯಾಂಕ್ ಪಡೆದಿರುತ್ತಾರೆ. ಎಂಬಿಎ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಲಕ್ಷಿತಾ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ದಾಮಿನಿ 2ನೇ ರ‍್ಯಾಂಕ್ ಪಡೆದಿರುತ್ತಾರೆ.