ಬೆಂಗಳೂರು: ಇತ್ತೀಚೆಗೆ ನಡೆದ ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕ ರಮೇಶ್ ಭೂಸನೂರ್ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಆದರೆ ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಸಮಯಕ್ಕೆ ಸರಿಯಾಗಿ ಬಾರದ ಕಾರಣ ಸ್ಪೀಕರ್ ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅನಗತ್ಯ ಆರೋಪಗಳ ಮೂಲಕ ಕಾಂಗ್ರೆಸ್ ನಿಂದ ದಾರಿ ತಪ್ಪಿಸುವ ಕೆಲಸ: ಬಿ.ವೈ.ವಿಜಯೇಂದ್ರ
ಶ್ರೀನಿವಾಸ ಮಾನೆ ಮೊದಲು ಸಭಾಂಗಣಕ್ಕೆ ಆಗಮಿಸಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಕಾರ್ಯಕರ್ತರ ಒತ್ತಾಯಿಸಿದಾಗ ಡಿಕೆಶಿ ಅವರನ್ನು ಕರೆದುಕೊಂಡು ಬರಲು ತೆರಳಿದ್ದರು. ಆದರೆ ಡಿಕೆ ಶಿವಕುಮಾರ್ ಜೊತೆ ಸಭಾಂಗಣಕ್ಕೆ ಬರುವಾಗ ವಿಳಂಬವಾಗಿತ್ತು.
ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಕಾದು ಕಾದು ಗರಂ ಆದ ಸ್ಪೀಕರ್ ಕಾಗೇರಿ ನಂತರ ಹೊರಟು ಹೋದರು. ಹೀಗಾಗಿ ಮಾನೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿಲ್ಲ.