Advertisement

ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ ಆಗಿದೆ : ಶ್ರೀನಿವಾಸ್‌ ಪ್ರಸಾದ್

01:31 PM Nov 26, 2020 | sudhir |

ಮೈಸೂರು: ಯಡಿಯೂರಪ್ಪ ಅವರಿಗೆ ಬುದ್ದಿವಂತಿಕೆ, ತಾಳ್ಮೆ ಬೇಕು. ಮುಖ್ಯಮಂತ್ರಿ ಅಂದ ಮೇಲೆ ಒತ್ತಡ ಇದ್ದೇ ಇರುತ್ತದೆ. ಆದರೆ, ಸ್ವಲ್ಪ ತಾಳ್ಮೆ ಇರಬೇಕು ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ. ಅವರು ಹುಷಾರಾಗಿ ಇರಬೇಕು. ಯಡಿಯೂರಪ್ಪ ಅವರು ಬದಲಾಗಿದ್ದಾರೆ ಅಂತ ಹೇಳುವುದಿಲ್ಲ. ಬದಲಾಗಿಲ್ಲ ಅಂತಲೂ ಹೇಳುವುದು ಕಷ್ಟ. ಅಧಿಕಾರ ಬಂದಾಗ ಸ್ವಲ್ಪ ಬದಲಾವಣೆ ಆಗೋದು ಸಹಜ. ಸಿದ್ದರಾಮಯ್ಯ ಅವರಿಗೆ ಅಧಿಕಾರ ಇತ್ತು, ಆದರೆ, ಬುದ್ದಿವಂತಿಕೆ ಇರಲಿಲ್ಲ. ಆದ್ದರಿಂದಲೇ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು. ಚುನಾವಣೆಯಲ್ಲೂ ಸೋಲು ಅನುಭವಿಸಬೇಕಾಯಿತು ಎಂದರು.

ನಿಗಮ, ಮಂಡಳಿಗಳಿಗೆ ನೇಮಕ ಮಾಡಿದ್ದಾರೆ. ಅದನ್ನು ಇನ್ನೂ ಚೆನ್ನಾಗಿ ಮಾಡಬಹುದಿತ್ತು. ಎಲ್ಲರೊಂದಿಗೆ ಚರ್ಚಿಸಿ ನೇಮಕ ಮಾಡಿದ್ದರೆ ಇನ್ನೂ ಚನ್ನಾಗಿ ಆಗುತ್ತಿತ್ತು. ಅವರಿಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಆದ್ದರಿಂದ ನನಗೆ ಬೇಸರ ಆಗಿದೆ ಅಂತ ನಾನು ಹೇಳಿದ್ದೇನೆ ಎಂದರು.

ಇದನ್ನೂ ಓದಿ:ಚದಲಪುರ ಬಳಿ ಭೀಕರ ಅಪಘಾತ ನಾಲ್ವರು ಸಾವು, ಇಬ್ಬರು ಚಿಂತಾಜನಕ

ಮಂತ್ರಿ ಮಂಡಲ ವಿಸ್ತರಣೆ ಸಂಬಂಧ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

Advertisement

ತಿಹಾರ್ ಜೈಲು ಕಂಡವರನ್ನು ಪಾರ್ಟಿಯ ಪ್ರೆಸಿಡೆಂಟ್ ಮಾಡಿದರೆ ಜನ ಹೇಗೆ ಓಟ್ ಹಾಕುತ್ತಾರೆ ? ಕಾಂಗ್ರೆಸ್‌ಗೆ ಶತಮಾನದ ಇತಿಹಾಸವಿದೆ ಎಂದು ಕುಟುಕಿದರು.

ಕೇಂದ್ರ ಸಚಿವ ಸ್ಥಾನಾವಕಾಶ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಮಂತ್ರಿಗಿರಿ ಬೇಡ. ನಾನು ಚುನಾವಣೆ ಸಾಕೆಂದು ನಿರ್ಧರಿಸಿದ್ದೆ. ಸಿದ್ದರಾಮಯ್ಯನವರ ನಿರ್ಧಾರಗಳಿಂದ ಬೇಸತ್ತು ಚುನಾವಣೆಯಲ್ಲಿ ಸ್ಪರ್ಧಿಸಿದೆ. ಅವರಿಗೆ ಪಾಠ ಕಲಿಸಿದ್ದಾಗಿದೆ. ವಾಜಪೇಯಿ ಅವಧಿಯಲ್ಲಿ ಸಚಿವನಾಗಿದ್ದೆ. ರಾಜ್ಯ ಸಚಿವನಾಗಿ, ಸ್ವಜಪಕ್ಷಪಾತವಿಲ್ಲದೆ, ಭ್ರಷ್ಟನಾಗದೆ ಕೆಲಸ ಮಾಡಿದ ತೃಪ್ತಿ ನನಗಿದೆ. ಅಷ್ಟು ಸಾಕು ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next