Advertisement

ವದಂತಿ ವಿರುದ್ಧ ಶ್ರೀನಿವಾಸಗೌಡ ಕಿಡಿ

07:22 AM Jul 11, 2019 | Team Udayavani |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದ್ದ ಕೋಲಾರದ ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡರು, ದೆಹಲಿಗೆ ತೆರಳಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರಿಂದ ಮುಂಬೈಗೆ ಹೋಗಿದ್ದಾರೆ, ಅತೃಪ್ತರ ತಂಡ ಸೇರಿಕೊಂಡಿದ್ದಾರೆ. ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಜತೆಗಿದ್ದರು ಎಂಬ ವದಂತಿ ಹಬ್ಬಿತ್ತು.

Advertisement

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ರೀತಿಯ ಸುದ್ದಿ ಬಿತ್ತರವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಶ್ರೀನಿವಾಸಗೌಡರು, “ನಾನು ದೆಹಲಿಗೆ ತೆರಳುತ್ತಿದ್ದೇನೆ. ಸಹಕಾರ ವಲಯದಲ್ಲಿರುವುದರಿಂದ ಸಭೆಯೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ವಿಜಯೇಂದ್ರ ಯಾರು ಎಂಬುದು ನನಗೆ ಗೊತ್ತಿಲ್ಲ, ಅವರ ಮುಖವನ್ನೂ ನೋಡಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next