Advertisement
ರಾಮ ಮಂದಿರ ನಿರ್ಮಾಣಕ್ಕೆ ದೀರ್ಘಾವಧಿ ತಗಲಿದ್ದು ಯಾಕೆ ಎಂಬುದು ನನ್ನನ್ನು ಕೂಡ ಸದಾ ಕಾಡುತ್ತಿತ್ತು. ಆದರೆ ಅದಕ್ಕೆ ರಾಮನ ಜನ್ಮ ಕುಂಡಲಿಯ ಸಮಸ್ಯೆಯೇ ಕಾರಣವಾಗಿರಬೇಕು ಎಂದೆನಿಸುತ್ತದೆ. ಯಾಕೆಂದರೆ, ಲೋಕ ಕಲ್ಯಾಣಕ್ಕಾಗಿ ರಾಮನ ಜನ್ಮವಾಗಿದ್ದರೂ ಆತ ಶಿಕ್ಷಣ ಹಾಗೂ ಸಿಂಹಾಸನ ಏರುವ ಸಂದರ್ಭದಲ್ಲಿ ಸುದೀರ್ಘ ವರ್ಷ ವನವಾಸ ಅನುಭವಿಸ ಬೇಕಾಯಿತು. ಇದೇ ರೀತಿ ರಾಮ ಮಂದಿರ ನಿರ್ಮಾಣಕ್ಕೂ ಸಮಯ ತಗುಲಿದ್ದಾಗಿರಬೇಕು. ಇದೀಗ ಕುಂಡಲಿ ನಿರ್ಣಯ ಆಗಿದ್ದು, ಹೊಸ ಮಂದಿರ ಆದಷ್ಟು ಬೇಗ ನಿರ್ಮಾಣವಾಗಲಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ವಿಶ್ವದ ಕಲ್ಯಾಣವಾಗಲಿ ಎಂಬುದೇ ಹಿಂದೂ ಸಂಸ್ಕೃತಿ. ಆದರೆ ವಿದೇಶೀಯರ ಆಕ್ರಮಣದಿಂದಾಗಿ ನಮ್ಮ ಸಂಸ್ಕೃತಿಯು ಮರೆಯಾಗುವಂತಾಗಿದೆ. ಹಿಂದೂ ಧರ್ಮದ ಪುನರುತ್ಥಾನಕ್ಕಾಗಿ ವಿಶ್ವ ಹಿಂದೂ ಪರಿಷತ್‌ನ ಸೃಷ್ಟಿಯಾಗಿದೆ ಎಂದರು. ವಿಹಿಂಪ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್ ಕುಮಾರ್, ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಚೌಧುರಿ, ಉಪಾಧ್ಯಕ್ಷರಾದ ಜೀವೇಶ್ವರ ಮಿಶ್ರಾ, ಬೀನಾ ಭಟ್, ಓಂ ಪ್ರಕಾಶ್ ಶಿಂಧೆ, ಜಗನ್ನಾಥ ಶಾಹಿ, ಚಂಪತ್ ರಾಯ್, ಮುಖ್ಯ ಟ್ರಸ್ಟಿ ರಮೇಶ್ ಮೋದಿ, ಕೋಶಾಧಿಕಾರಿ ಗೋಪಾಲ್ ಜುಂಜನ್‌ವಾಲ, ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಂದೆ, ಸಂಘಟನ ಕಾರ್ಯದರ್ಶಿ ವಿನಾಯಕ ರಾವ್ ದೇಶಪಾಂಡೆ, ದಕ್ಷಿಣ ಕರ್ನಾಟಕ ಅಧ್ಯಕ್ಷರಾದ ವಿಜಯಲಕ್ಷಿ$ಉಪಸ್ಥಿತರಿದ್ದರು.
Related Articles
Advertisement
ಹಿಂದೂಗಳ ಮೇಲಿನ ಆಕ್ರಮಣ ತಡೆಯೋಣವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೋಕೆ ಮಾತನಾಡಿ, ಹಿಂದೂಗಳ ಮತಾಂತರ ತಡೆಯಲು ನಮ್ಮಿಂದ ಪೂರ್ಣವಾಗಿ ಸಾಧ್ಯವಾಗಿಲ್ಲ. ಧರ್ಮ ನಿರಪೇಕ್ಷತೆ ಹೆಸರಿನಲ್ಲಿ ಹಿಂದೂಗಳ ಮೇಲೆ ಆಕ್ರಮಣಕಾರಿ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಇದನ್ನು ವಿರೋಧಿಸಬೇಕಾಗಿದೆ. ಆದರೆ 2014ರಿಂದೀಚೆಗೆ ಸಂಕುಚಿತವಾಗಿದ್ದ ಹಿಂದೂ ಧರ್ಮದವರು ತಮ್ಮನ್ನು ತಾವು ಹಿಂದೂಗಳೆಂದು ಕರೆಸಿಕೊಳ್ಳಲು ಹೆಮ್ಮೆ ಪಡುವಂತಾಗಿದೆ. ಇದು ವಿಎಚ್‌ಪಿಯ ಶಕ್ತಿ ಸಾಮರ್ಥ್ಯದಿಂದ ಸಾಧ್ಯವಾಗಿದೆ ಎಂದರು.