Advertisement

ಡಿಸಿಎಂ ಸಿಗದ ಹಿನ್ನೆಲೆ: ರಾಮುಲು ಮುನಿಸು ಸಂಪುಟ ಸಭೆಗೆ ಗೈರು

09:57 AM Dec 13, 2019 | Team Udayavani |

ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಗೈರು ಹಾಜರಾಗಿದ್ದರು.

Advertisement

ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತಿಲ್ಲ ಎನ್ನುವ ಕಾರಣಕ್ಕೆ ರಾಮುಲು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅದೇ ಕಾರಣಕ್ಕೆ ಬೆಂಗಳೂರಿನಲ್ಲಿ ಇದ್ದರೂ ಸಂಪುಟ ಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ ವಿಕಾಸಸೌಧದಲ್ಲಿ ನಡೆದ ನೈಟಿಂಗೇಲ್‌ ಪ್ರಶಸ್ತಿ ಪ್ರದಾನ ಸಮಾರಂಭದಿಂದಲೂ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅನುಪಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ತಳವಾರ, ಪರಿವಾರ ಹಾಗೂ ಸಿದ್ದಿ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಈಗಾಗಲೇ ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಎಸ್ಟಿ ಸಮುದಾಯ ಹೋರಾಟ ನಡೆಸಿದ್ದು, ಈಗಿರುವ ಶೇಕಡಾ 3.5 ರಿಂದ ಶೇಕಡಾ 7 ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದರ ನಡುವೆ ಸರ್ಕಾರ ಮತ್ತೆ ಮೂರು ಜಾತಿಗಳನ್ನು ಎಸ್ಟಿ ಸಮುದಾಯಕ್ಕೆ ಸೇರಿಸಿರುವುದು. ರಾಮುಲು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಮುಖ್ಯಮಂತ್ರಿಯ ಅನುಮತಿ ಪಡೆದು ಸಂಪುಟ ಸಭೆಗೆ ಗೈರು ಹಾಜರಾಗಿದ್ದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next