Advertisement

ಕುಮಾರಸ್ವಾಮಿ ಗಂಭೀರ ರಾಜಕಾರಣಿಯೇ ಅಲ್ಲ: ಶ್ರೀರಾಮುಲು

10:00 AM Feb 08, 2020 | Team Udayavani |

ಚಿಕ್ಕಮಗಳೂರು: ಎಚ್. ಡಿ ಕುಮಾರಸ್ವಾಮಿ ಗಂಭೀರ ರಾಜಕಾರಣಿಯೇ ಅಲ್ಲ, ಕುಮಾರಸ್ವಾಮಿ ಕೀಳು ಮಟ್ಟದ ಪದಬಳಕೆ ಮಾಡುತ್ತಾರೆ. ನಾನು ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.

Advertisement

ಚಿಕ್ಕಮಗಳೂರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರ ಮನೆ ಯಾರು ಹಾಳು ಮಾಡಿದ್ದಾರೆಂದು ಜನಕ್ಕೆ ಗೊತ್ತಿದೆ. ನಾನು ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ . ಅವರ ಭಾಷೆಯೇ ಬೇರೆ, ನನ್ನ ಭಾಷೆಯೇ ಬೇರೆ. ಯಾರು ಏನೆಂದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದರು.

ಕರೋನ ವೈರಸ್ ಸಂಬಂಧ ರಾಜ್ಯದ 97 ಮಂದಿ ರಕ್ತ ಪರೀಕ್ಷೆ ಮಾಡಲಾಗಿದೆ. ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಸೋಂಕು ಕೇರಳ ರಾಜ್ಯದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗ್ರತಿ ಮೂಡಿಸುವ ಸಲುವಾಗಿ ಮೊಬೈಲ್ ಎಲ್ ಇ ಡಿ ವ್ಯಾನ್ ಗೆ ಚಾಲನೆ ನೀಡಲಾಗಿದೆ. ರಾಜ್ಯದ 17 ಜಿಲ್ಲೆಗಳಲ್ಲಿ ಈ ವ್ಯಾನ್ ಕಾರ್ಯ ನಿರ್ವಹಿಸುತ್ತಿದ್ದು ಜನರಲ್ಲಿ ಜಾಗ್ರತಿ ಮೂಡಿಸುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next