ಧಾರವಾಡ : ಭಾರತ ಜೋಡೋ ಯಾತ್ರೆ ಹೆಸರಿನಲ್ಲಿ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಕೊಟ್ಟಿದ್ದ ಬೂಸ್ಟರ್ ಡೋಸ್ ಫೇಲ್ ಆಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಡೆದ ಮನೆಯಾಗಿರುವ ರಾಜ್ಯ ಕಾಂಗ್ರೆಸ್‌ನಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನು ಜೋಡಿಸುವ ವಿಚಾರದಲ್ಲಿ ರಾಹುಲ್ ಗಾಂಧಿ ಇದ್ದರು. ಆದರೆ ಈಗ ಕಾಂಗ್ರೆಸ್‌ನಲ್ಲಿ ಸಾಕಷ್ಟು ಹೊಸ ಹೊಸ ಕದನಗಳು ಹುಟ್ಟಿಕೊಳ್ಳುತ್ತಿದ್ದು, ಹೀಗಾಗಿ ಸಂಧಾನ ಮಾಡಲು ಹಲವು ನಾಯಕರು ರಾಜ್ಯಕ್ಕೆ ಬರುತ್ತಿದ್ದಾರೆ. ಇನ್ನು ರಾಜ್ಯದ ಸಿಎಂ ಖುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಎದುರು ನೋಡುತ್ತಿದ್ದಾರೆ. ಆದರೆ ಆ ಖುರ್ಚಿ ಖಾಲಿ ಇಲ್ಲ ಎಂದರು.
ನಮಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ನಾಲ್ಕು ದಶಕಗಳ ಬೇಡಿಕೆ ಈಗ ಬಿಜೆಪಿ ಈಡೇರಿಸಿದೆ. ಮುಂದೆ ಬಿಜೆಪಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಆಗ ಕಾಂಗ್ರೆಸ್ ಮತ್ತೊಮ್ಮೆ ನೆಲ ಸಮವಾಗುತ್ತದೆ ಎಂದರು.
ಮೀಸಲಾತಿ ಹೆಚ್ಚಳ ಮಾಡಿದ ಸರಕಾರಕ್ಕೆ ಧನ್ಯವಾದ ಸಲ್ಲಿಸುವ ಉದ್ದೇಶದಿಂದ ಬಳ್ಳಾರಿಯಲ್ಲಿ ನ.೨೦ ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಮೇಶ ಜಾರಕಿಹೊಳಿ, ಶಿವನಗೌಡ ಪಾಟೀಲ ಸೇರಿದಂತೆ ಹಲವಾರು ನಾಯಕರು ನಮ್ಮ ತಂಡದಲ್ಲಿದ್ದಾರೆ. ರಮೇಶ ಜಾರಕಿಹೊಳಿ ಮತ್ತೆ ಸಚಿವರಾಗಬೇಕು ಎಂಬ ವಿಚಾರದ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಇದನ್ನೂ ಓದಿ : ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿ ಕೇಜ್ರಿವಾಲ್ ಟ್ವೀಟ್