Advertisement

ಶ್ರೀರಂಗಪಟ್ಟಣ: ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ; ವಿದ್ಯಾರ್ಥಿನಿ ಆತ್ಮಹತ್ಯೆ

07:56 PM Jun 18, 2022 | Team Udayavani |

ಶ್ರೀರಂಗಪಟ್ಟಣ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.

Advertisement

ಮಂಡ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜೆ.ಸ್ಪoದನಾ(17) ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಹದೇವಪುರ ಗ್ರಾಮದ ಜಗದೀಶ್ ಎಂಬುವವರ ಪುತ್ರಿ ಸ್ಪಂದನಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ್ದಳು. ನಂತರ ಮಂಡ್ಯ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಸೋಮವಾರ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಾಗ ತಾನು ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿವುದಕ್ಕೆ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಈ ಸಂಬoಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next