Advertisement

ಬಿಯರ್ ಸಾಗಿಸುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

11:34 AM Jul 01, 2022 | Team Udayavani |

ಶ್ರೀರಂಗಪಟ್ಟಣ: ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೌರಿಪುರ ಬಳಿಯ ಮೈ- ಬೆಂ ಹೆದ್ದಾರಿ ಬಳಿ ಜೂನ್‌ 30 ರ ತಡರಾತ್ರಿ ನಡೆದಿದೆ.

Advertisement

ತಮಿಳುನಾಡು ಮೂಲದ ಎಳುಮಲೈ(60) ಮೃತ ಚಾಲಕ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮೈಸೂರಿಗೆ ಬಿಯರ್ ಗಳನ್ನು ಸಾಗಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯಲ್ಲಿ ಬಿಯರ್ ಇದ್ದದ್ದನ್ನು ಗಮನಿಸಿದ ಸ್ಥಳಿಯರು ಬಿಯರ್ ಬಾಟಲ್ ಗಳನ್ನು ಹೊತ್ತುಯ್ದಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next