ಶ್ರೀರಂಗಪಟ್ಟಣ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಶ್ರೀರಂಗಪಟ್ಟದಲ್ಲಿ ಹಿಂದೂಪರ ಸಂಘಟನಗಳ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿ ಹತ್ಯೆ ಖಂಡಿಸಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ ಧರಣಿ ಕುಳಿತು ಹಿಂದೂ ಕಾರ್ಯಕರ್ತಮ ಹತ್ಯೆ ಗೈದ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಘಟನೆಯನ್ನು ರಾಜ್ಯದಲ್ಲಿ ಶಾಶ್ವತವಾಗಿ ನಿಷೇಧ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ:ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಚಿಂಚೋಳಿಯಲ್ಲಿ ಭುಗಿಲೆದ್ದ ಆಕ್ರೋಶ
ಪ್ರತಿಭಟನೆಯಲ್ಲಿ ವಿ.ಹಿಂ.ವೇ ವೇದಿಕೆಯ ಚಂದನ್, ವಿ.ಹಿಂ. ಪ ಬಾಲರಾಜು, ಭಜರಂಗದಳ ಗಿರೀಶ್ ಸೇರಿದಂತೆ ಬಿಜೆಪಿ ಮುಖಂಡರಾದ ಪಿ.ಹಳ್ಳಿ ರಮೇಶ್,ಶ್ರೀಧರ್,ವಿನಯ್,ದೇವರಾಜು, ಸಿದ್ದಯ್ಯ, ನಾರಾಯಣ್, ಸೇರಿದಂತೆ ಹಲವರು ಭಾಗವಹಿಸಿದ್ದರು.