Advertisement

ಶ್ರೀರಂಗಪಟ್ಟಣ: ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೂಡಿ ಹಾಕಿದ ಶಿಕ್ಷಕಿ

02:44 PM Jan 06, 2022 | Team Udayavani |

ಶ್ರೀರಂಗಪಟ್ಟಣ : ಮುಖ್ಯ ಶಿಕ್ಷಕಿಯೊಬ್ಬರು ಮೊಬೈಲ್ ತಂದ ಕಾರಣಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

Advertisement

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ಕಳೆದ ಒಂದು ಒಂದು ವಾರದ ಹಿಂದೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತರಗತಿಗೆ ಮೊಬೈಲ್ ತಂದಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೋಯ್ದ ಮುಖ್ಯ ಶಿಕ್ಷಕಿ ಸ್ನೇಹಲತಾ ಕಿರುಕುಳ ನೀಡಿ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಪೋಷಕರು ಮುಖ್ಯ ಶಿಕ್ಷಕಿಯ ವಿರುದ್ದ ದೂರು ನೀಡಲು ಮುಂದಾಗಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ಹಾಗೂ ಬಿಇಒ ಅನಂತರಾಜು ಅವರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next