Advertisement

ಸಂಪುಟದಲ್ಲಿ ಮಹತ್ವದ ಬದಲಾವಣೆ : ಶ್ರೀರಾಮುಲು ಕೈಯಲ್ಲಿದ್ದ ಅರೋಗ್ಯ ಖಾತೆ ಸುಧಾಕರ್ ಹೆಗಲಿಗೆ?

08:32 PM Oct 11, 2020 | sudhir |

ಬೆಂಗಳೂರು : ಎರಡು ಕ್ಷೇತ್ರಗಳ ಉಪಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿರುವ ನಡುವೆಯೇ ಆಯ್ದ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.

Advertisement

ಸಚಿವ ಬಿ.ಶ್ರೀರಾಮುಲು ಅವರ ಬಳಿಯಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ವಹಿಸಲು ತೀರ್ಮಾನವಾಗಿದೆ. ಹಾಗೆಯೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿಯಿರುವ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ವಹಿಸಲಾಗಿದ್ದು, ಸದ್ಯದಲ್ಲೇ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಅನೈತಿಕ ಸಂಬಂಧಕ್ಕೆ ಅಡ್ಡಿ; ಪತಿಯನ್ನೇ ಕೊಂದು ಆತ್ಮಹತ್ಯೆ ನಾಟಕವಾಡಿದ್ದ ಪತ್ನಿ

ಕೋವಿಡ್- 19 ನಿಯಂತ್ರಣ, ನಿರ್ವಹಣೆ ಹೊಣೆಗಾರಿಕೆಯಲ್ಲಿ ಸಮನ್ವಯದ ಕೊರತೆ, ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣದ ಜತೆಗೆ ಆರೋಗ್ಯ ಖಾತೆ ಜವಾಬ್ದಾರಿಯನ್ನೂ ವಹಿಸಿ ಸುಗಮ ವಾಗಿ ಕಾರ್ಯ ನಿರ್ವಹಿಸುವಂತೆ ಮಾಡುವ ಉದ್ದೇಶದಿಂದ ಸಂಪುಟ ಕಸರತ್ತಿಗೂ ಮೊದಲೇ ಆಯ್ದ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.