Advertisement
ಮಾಧ್ಯಮಗಳ ಜತೆ ಮಾತನಾಡಿ, ಕೇವಲ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆ ಗೆ ಅವಕಾಶ ನೀಡಲಾಗುತ್ತಿದೆ. ಇದು ಸರಿಯಲ್ಲ ಎಂದು ಕೇಂದ್ರದ ನೀತಿ ವಿರುದ್ಧ ಅಸಮಾಧಾನ ಹೊರಹಾಕಿದರು.
Related Articles
Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.
ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.
ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಟ್ವೀಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.