Advertisement

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

05:47 PM Oct 07, 2022 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದಿಂದ 20 ಸಾವಿರ‌ ನೇಮಕಾತಿ ವಿಚಾರಕ್ಕೆ ಸಂಬಂಧಿಸಿಇನ್ನೆರಡು ದಿನಗಳಲ್ಲಿ ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಗೆ ಪತ್ರ ಬರೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಮಾಧ್ಯಮಗಳ ಜತೆ ಮಾತನಾಡಿ, ಕೇವಲ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆ ಗೆ ಅವಕಾಶ ನೀಡಲಾಗುತ್ತಿದೆ. ಇದು ಸರಿಯಲ್ಲ ಎಂದು ಕೇಂದ್ರದ ನೀತಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಆಯಾ ರಾಜ್ಯದಲ್ಲಿ ಭಾಷಾವಾರು ಪರೀಕ್ಷೆಗೆ ಅವಕಾಶ ನೀಡಬೇಕು. ಯುಪಿಎಸ್ ಸಿ ಮಾದರಿಯಲ್ಲೇ ಅವಕಾಶ ನೀಡಬೇಕು. ಈ ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ : ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಟ್ವೀಟ್ ಮಾಡಿಯೂ ಹೆಚ್ ಡಿಕೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಪ್ರಶ್ನಿಸಿದ್ದಾರೆ.

Advertisement

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಟ್ವೀಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next