Advertisement

ಶಿಕ್ಷಕರ ನೇಮಕಾತಿ ಹಗರಣ : ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯಗೆ ಇ.ಡಿ ಸಮನ್ಸ್

05:06 PM Jul 26, 2022 | Team Udayavani |

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣ ನಡೆದಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

Advertisement

ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕೋಲ್ಕತ್ತದ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸೂಚಿಸಲಾಗಿದ್ದು ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ.

ಶಿಕ್ಷಕರ ನೇಮಕಾತಿ ಹಗರಣ ನಡೆದಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಇ.ಡಿ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು.

ಇದನ್ನೂ ಓದಿ : ಇಂದಿನಿಂದಲೇ ಮುಂಗಾರು ಹಂಗಾಮಿಗೆ ಶಾಸ್ತ್ರೀ, ಬಸವ ಸಾಗರ ಜಲಾಶಯಗಳಿಂದ ನೀರು ಬಿಡುಗಡೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next