Advertisement

ಎಸ್ಸೆಸ್ಸೆಲ್ಸಿ: ವಿಜ್ಞಾನ ಪರೀಕ್ಷೆಗೆ 2,157 ಪರೀಕ್ಷಾರ್ಥಿ ಗೈರು

10:41 AM Jun 30, 2020 | Suhan S |

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 35,775 ಪರೀಕ್ಷಾರ್ಥಿಗಳಲ್ಲಿ 33618 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದರೆ, 2157 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷಾ ಅಕ್ರಮ ನಡೆದಿಲ್ಲ ಎಂದು ಡಿಡಿಪಿಐ ಪ್ರಸನ್ನಕುಮಾರ ತಿಳಿಸಿದ್ದಾರೆ.

Advertisement

ಬಸವನಬಾಗೇವಾಡಿ ತಾಲೂಕಿನಿಂದ 5027 ಪರೀಕ್ಷಾರ್ಥಿಗಳು ಹೆಸರು ನೋಂದಾಯಿಸಿದ್ದು, 208 ಪರೀಕ್ಷಾರ್ಥಿಗಳು ಗೈರಾಗಿದ್ದು, 4819 ಪರೀಕ್ಷಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ವಿಜಯಪುರ ನಗರದಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 7509 ಪರೀಕ್ಷಾರ್ಥಿಗಳಲ್ಲಿ 6711 ಪರೀಕ್ಷಾಥಿಗಳು ಪರೀಕ್ಷೆ ಬರೆದರೆ, 798 ಗೈರಾಗಿದ್ದರು. ವಿಜಯಪುರ ಗ್ರಾಮೀಣ ವಲಯದ ಹೆಸರು ನೋಂದಾಯಿಸಿದ 5655 ಪರೀಕ್ಷಾರ್ಥಿಗಳಲ್ಲಿ 5420 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 235 ಪರೀಕ್ಷಾರ್ಥಿಗಳು ಗೈರಾಗಿದ್ದರು. ಚಡಚಣ ತಾಲೂಕಿನಿಂದ ಹೆಸರು ನೋಂದಾಯಿಸಿದ 2564 ಪರೀಕ್ಷಾರ್ಥಿಗಳಲ್ಲಿ ಪರೀಕ್ಷೆಗೆ ಹಾರಾದ 2405 ಪರೀಕ್ಷಾರ್ಥಿಗಳು ಪರೀಕ್ಷೆ ಬರೆದರೆ, 159 ಪರೀಕ್ಷಾರ್ಥಿಗಳು ಗೈರಾಗಿದ್ದರು. ಇಂಡಿ ತಾಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 3784 ಪರೀಕ್ಷಾರ್ಥಿಗಳಲ್ಲಿ 3507 ಪರೀಕ್ಷಾರ್ಥಿಗಳು ಪರೀಕ್ಷೆ ಬರೆದಿದ್ದು, 277 ಪರೀಕ್ಷಾರ್ಥಿಗಳು ಗೈರಾಗಿದ್ದರು. ಮುದ್ದೇಬಿಹಾಳ ತಾಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 5298 ಪರೀಕ್ಷಾರ್ಥಿಗಳಲ್ಲಿ 5,079 ಪರೀಕ್ಷಾರ್ಥಿಗಳು ಪರೀಕ್ಷೆ ಬರೆದರೆ 219 ಪರೀಕ್ಷಾರ್ಥಿಗಳು ಗೈರಾಗಿದ್ದರು. ಸಿಂದಗಿ ತಾಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 5938 ಪರೀಕ್ಷಾರ್ಥಿಗಳಲ್ಲಿ 5677 ಪರೀಕ್ಷಾರ್ಥಿಗಳು ಹೆಸರು ನೋಂದಾಯಿಸಿದ್ದು, 261 ಪರೀಕ್ಷಾರ್ಥಿಗಳು ಗೈರಾಗಿದ್ದರು ಎಂದು ಡಿಡಿಪಿಐ ವಿವರ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next