Advertisement

ಎಸ್‍ಎಸ್‍ಎಲ್‍ಸಿ ಪರೀಕ್ಷೆ: 12 ಮಂದಿ ನಕಲಿ ಅಭ್ಯರ್ಥಿಗಳು ಪೊಲೀಸ್ ವಶಕ್ಕೆ

01:54 PM Mar 28, 2022 | Team Udayavani |

ಹುಮನಾಬಾದ: ಎಸ್ಎಸ್ಎಲ್‍ಸಿ ಪರೀಕ್ಷೆಯಲ್ಲಿ 12 ಜನ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದು, ನಕಲಿ ಅಭ್ಯರ್ಥಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

Advertisement

ಪಟ್ಟಣದ ಶಾಹೀನ್ ಹಾಗೂ ಅಲಾಮೀನ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುಂಚೆ ಕೇಂದ್ರದ ಸಿಬಂದಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೂಡಲೇ ಪೊಲೀಸರಿಗೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಹಶೀಲ್ದಾರ ಡಾ। ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next